Friday, June 26, 2026
Homeಕರಾವಳಿಉಡುಪಿಉಡುಪಿ: ಟೈಮಿಂಗ್‌ ವಿಚಾರಕ್ಕೆ ಹೊಡೆದಾಡಿಕೊಂಡ ಕಂಡಕ್ಟರ್ ಹಾಗೂ ಡ್ರೈವರ್; ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್‌

ಉಡುಪಿ: ಟೈಮಿಂಗ್‌ ವಿಚಾರಕ್ಕೆ ಹೊಡೆದಾಡಿಕೊಂಡ ಕಂಡಕ್ಟರ್ ಹಾಗೂ ಡ್ರೈವರ್; ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್‌

- Advertisement -
- Advertisement -

ಉಡುಪಿ: ಟೈಮಿಂಗ್‌ ವಿಚಾರಕ್ಕೆ ಕಂಡಕ್ಟರ್ ಹಾಗೂ ಡ್ರೈವರ್ ಹೊಡೆದಾಡಿಕೊಂಡ ಘಟನೆ ಉಡುಪಿಯ ಟೈಗರ್‌ ಸರ್ಕಲ್‌ ಖಾಸಗಿ ಬಸ್‌ ನಿಲ್ದಾಣದ ಬಳಿ ನಡೆದಿದೆ. ಗಲಾಟೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಮಣಿಪಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ.ಉಚ್ಚಿಲ ಮಂಜುನಾಥ ಬಸ್ಸಿನ ಚಾಲಕ ಮೊಹಮ್ಮದ್‌ ಆಲ್ಪಾಜ್‌(25), ಹಾಗೂ ಆನಂದ ಬಸ್ಸಿನ ಕಂಡಕ್ಟರ್‌ ವಿಜಯಕುಮಾರ್‌(25) ಬಂಧಿತರು.

ಎ.2ರಂದು ಸಂಜೆ 4:30 ಗಂಟೆ ಸುಮಾರಿಗೆ ಮಣಿಪಾಲದ ಟೈಗರ್‌ ಸರ್ಕಲ್‌ ಬಳಿ ಇರುವ ಖಾಸಗಿ ಬಸ್‌ ನಿಲ್ದಾಣದಲ್ಲಿ ಬಸ್‌ ನಿಲ್ಲಿಸುವ ಟೈಮಿಂಗ್‌ ವಿಚಾರದಲ್ಲಿ ಆನಂದ್‌ ಬಸ್‌ ನ ಕಂಡಕ್ಟರ್‌ ವಿಜಯ ಕುಮಾರ್‌ ಹಾಗೂ ಮಂಜುನಾಥ ಬಸ್ಸಿನ ಚಾಲಕ ಮೊಹಮ್ಮದ್‌ ಆಲ್ಪಾಜ್‌ ನಡುವೆ ಗಲಾಟೆ ನಡೆದಿದೆ. ಈ ವಿಡಿಯೋ ಈಗ ಎಲ್ಲಾ ಕಡೆ ವೈರಲ್ ಆಗಿದೆ.

 ‌

ಮಣಿಪಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ.ಬಂಧಿತ ಆರೋಪಿಗಳನ್ನು ಉಚ್ಚಿಲ ಮಂಜುನಾಥ ಬಸ್ಸಿನ ಚಾಲಕ ಮೊಹಮ್ಮದ್‌ ಆಲ್ಪಾಜ್‌(25), ಹಾಗೂ ಆನಂದ ಬಸ್ಸಿನ ಕಂಡಕ್ಟರ್‌ ವಿಜಯಕುಮಾರ್‌(25), ಚಿತ್ರದುರ್ಗ ಎಂದು ಗುರುತಿಸಲಾಗಿದೆ.

ಆರೋಪಿಗಳನ್ನು ದಸ್ತಗಿರಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು,  ಬಸ್‌ಗಳನ್ನು ಅಮಾನತ್ತು ಪಡಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು  ತಿಳಿಸಿದೆ.

- Advertisement -

Latest News

error: Content is protected !!