ಮಂಗಳೂರು: ತೊಕ್ಕೊಟ್ಟು ಸಮೀಪದ ದೇರಳಕಟ್ಟೆ ನಾಟೆಕಲ್ ನಲ್ಲಿ ಚಲಿಸುತ್ತಿದ್ದ ಬಸ್ ನಲ್ಲಿಯೇ ನಿರ್ವಾಹಕನೋರ್ವ ಪ್ರಜ್ಞೆ ತಪ್ಪಿ ಬಿದ್ದ ಘಟನೆ ನಡೆದಿದ್ದು, ಈ ಸಂದರ್ಭದಲ್ಲಿ ಚಾಲಕನ ಸಮಯಪ್ರಜ್ಞೆಯಿಂದ ನಿರ್ವಾಹಕನ ಜೀವ ಉಳಿದಿದೆ.
ಮುಡಿಪುವಿನಿಂದ ಮಂಗಳೂರಿಗೆ ಶುಕ್ರವಾರ ಬೆಳಗ್ಗೆ 8.00 ಗಂಟೆಗೆ ತೆರಳುತ್ತಿದ್ದಾಗ ಕಂಬಳಪದವು ಸಮೀಪದಲ್ಲಿ ಸರಕಾರಿ ಬಸ್ ನಿರ್ವಾಹಕ ಸಂಜೀವ್ ಅವರು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಜೀವನ್ಮರಣ ಸ್ಥಿತಿಯಲ್ಲಿದ್ದ ಬಸ್ ನಿರ್ವಾಹಕನನ್ನು ಚಾಲಕ ಅವೀಶ್ ಮದರನ್ ಅವರು ತಕ್ಷಣವೇ ನೇರವಾಗಿ ದ ದೇರಳಕಟ್ಟೆ ಕಣಚೂರು ಆಸ್ಪತ್ರೆ ತನಕ ಜೀರೋ ಟ್ರಾಫಿಕ್ ಸಿಗ್ನಲ್ ನಲ್ಲಿ ಚಲಾಯಿಸಿ ಕ್ಲಪ್ತ ಸಮಯಕ್ಕೆ ಚಿಕಿತ್ಸೆ ಕೊಡಿಸಿ ಜೀವ ಉಳಿಸಿದ್ದಾರೆ.
ಸದ್ಯ ಜೀವ ಉಳಿಸಿದ ಬಸ್ ಚಾಲಕನನ್ನು ಕಣಚೂರು ಆಸ್ಪತ್ರೆಯ ಚೇರ್ ಮೆನ್ ಡಾ. ಯುಕೆ. ಮೋನು ಕಣಚೂರು ಅವರ ಸೂಚನೆಯ ಮೇರೆಗೆ ಆಸ್ಪತ್ರೆಯ ಪ್ರಮುಖರಾದ ಡಾ. ಇಸ್ಮಾಯಿಲ್ ಹೆಜಮಾಡಿ, ಡಾ. ವೆಂಕಟ್ ರಾಯ ಪ್ರಭು, ಅಶ್ರಫ್ ಚೆಂಬುಗುಡ್ಡೆ, ಅಸ್ಗರ್ ಸಮ್ಮುಖದಲ್ಲಿ ಸನ್ಮಾನಿಸಲಾಗಿದೆ.


