Sunday, May 5, 2024
Homeಕರಾವಳಿಉಡುಪಿಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಗೆದ್ದ ಗುರುರಾಜ ಪೂಜಾರಿಗೆ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ವತಿಯಿಂದ ಅಭಿನಂದನೆ

ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಗೆದ್ದ ಗುರುರಾಜ ಪೂಜಾರಿಗೆ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ವತಿಯಿಂದ ಅಭಿನಂದನೆ

spot_img
- Advertisement -
- Advertisement -

ಬೆಳ್ತಂಗಡಿ: ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಗೆದ್ದ ಗುರುರಾಜ ಪೂಜಾರಿಯವರನ್ನು ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ವತಿಯಿಂದ ಅಭಿನಂದಿಸಲಾಯಿತು.

ಈ ವೇಳೆ ಮಾತನಾಡಿದ ಧರ್ಮಸ್ಥಳ ಧರ್ಮಾಧಿಕಾರಿ, ಸಂಸದ ಡಾ.ಡಿ.ವೀರೇಂದ್ರ ಹೆಗ್ಗಡೆ ವಿದ್ಯಾರ್ಥಿಗಳು ಅವಕಾಶಗಳ ಸದುಪಯೋಗ ಪಡೆದು ಉತ್ತಮ ಚಾರಿತ್ರ್ಯ ಮೈಗೂಡಿಸಿಕೊಂಡು ಆದರ್ಶ ವ್ಯಕ್ತಿತ್ವ ನಿರ್ಮಾಣ ಮಾಡಿಕೊಳ್ಳಬೇಕು. ಸಭ್ಯ, ಸುಸಂಸ್ಕೃತ ನಾಗರಿಕರಾಗಿ ರೂಪುಗೊಳ್ಳಬೇಕು. ಜ್ಞಾನ ಸಂಗ್ರಹವೇ ಶಿಕ್ಷಣದ ಗುರಿಯಲ್ಲ ಎಂದು ಕಿವಿಮಾತು ಹೇಳಿದರು. ವಿದ್ಯಾರ್ಥಿಗಳ ಸಾಧನೆ ಗುರುತಿಸಿ ಪ್ರೋತ್ಸಾಹಿಸುವುದೇ ಸಾಧಕರ ಸನ್ಮಾನದ ಉದ್ದೇಶ. ಪ್ರಾಥಮಿಕ ಶಾಲಾ ಹಂತದಿಂದಲೇ ವಿದ್ಯಾರ್ಥಿಗಳು ತಮ್ಮ ಆಸಕ್ತಿಯ ಕ್ಷೇತ್ರವನ್ನು ಗುರುತಿಸಿ ಕಠಿಣ ಪರಿಶ್ರಮ ಮತ್ತು ನಿರಂತರ ಅಭ್ಯಾಸದೊಂದಿಗೆ ಉನ್ನತ ಸಾಧನೆ ಮಾಡಬೇಕು. ದೇವರು ಅಗೋಚರವಾಗಿ ನಮ್ಮ ಎಲ್ಲ ಚಟುವಟಿಕೆಗಳನ್ನು ಗಮನಿಸುತ್ತಾರೆ. ಪ್ರತಿಯೊಬ್ಬರೂ ತಮ್ಮ ಕಾರ್ಯಕ್ಷೇತ್ರದಲ್ಲಿ ಸತ್ಯ, ಧರ್ಮ, ನ್ಯಾಯ, ನೀತಿಯ ಪರಿಪಾಲನೆಯೊಂದಿಗೆ ಪ್ರಾಮಾಣಿಕ ವ್ಯವಹಾರ ನಡೆಸಬೇಕು. ಆತ್ಮಸಾಕ್ಷಿಗೆ ಸರಿಯಾಗಿ ಕರ್ತವ್ಯ ಮಾಡಬೇಕು ಎಂದರು.

ಶಾಸಕ ಹರೀಶ್ ಪೂಂಜ ಮಾತನಾಡಿ, ವಿದ್ಯಾರ್ಥಿಗಳು ಬಾಲ್ಯದಲ್ಲಿಯೇ ತಮ್ಮ ಆಸಕ್ತಿಯ ಕ್ಷೇತ್ರವನ್ನು ಗುರುತಿಸಿಕೊಂಡು ಪ್ರಬಲ ಇಚ್ಛಾಶಕ್ತಿಯೊಂದಿಗೆ ನಿರಂತರ ಅಭ್ಯಾಸ, ಕಠಿಣ ಪರಿಶ್ರಮ ಮತ್ತು ಆತ್ಮವಿಶ್ವಾಸದಿಂದ ಪ್ರಯತ್ನಿಸಿದಲ್ಲಿ ಉನ್ನತ ಸಾಧನೆಯೊಂದಿಗೆ ಯಶಸ್ಸು ಪಡೆಯಬಹುದು ಎಂದರು.

ಬಳಿಕ ರಾಜ್ಯಸಭಾ ಸದಸ್ಯರಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಉಜಿರೆ ಎಸ್‌ಡಿಎಂ ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ವಿಜೇತ ಗುರುರಾಜ ಪೂಜಾರಿ ಅವರನ್ನು ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ವತಿಯಿಂದ ಗೌರವಿಸಿದ್ರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಗುರುರಾಜ ಪೂಜಾರಿ, ಎಸ್‌ಡಿಎಂ ಕಾಲೇಜಿನಲ್ಲಿ ಪಡೆದ ತರಬೇತಿ ಪ್ರೋತ್ಸಾಹ ಮತ್ತು ಮಾರ್ಗದರ್ಶನವನ್ನು ಸ್ಮರಿಸಿದರು ಕಾಲೇಜಿನ ಉಪಪ್ರಾಂಶುಪಾಲ ಡಾ.ಎ.ಜಯಕುಮಾರ್ ಶೆಟ್ಟಿ ವಾರ್ಷಿಕ ವರದಿ ಮಂಡಿದರು. ಕಾಲೇಜು ಪ್ರಾಂಶುಪಾಲ ಡಾ.ಪಿ.ಎನ್.ಉದಯಚಂದ್ರ ಸ್ವಾಗತಿಸಿದರು. ಕಲಾ ವಿಭಾಗದ ಡೀನ್ ಡಾ.ಶಲೀಪ್ ಕುಮಾರಿ ವಂದಿಸಿದರು. ಡಾ.ಬಿ.ಎ.ಕುಮಾರ್ ಹೆಗ್ಡೆ, ಡಾ.ಚಿತ್ರಾ, ಮತ್ತುಡಾ ನೆಫಿಸೆತ್ ಕಾರ್ಯಕ್ರಮ ನಿರೂಪಿಸಿದರು.

- Advertisement -
spot_img

Latest News

error: Content is protected !!