Thursday, June 4, 2026
Homeತಾಜಾ ಸುದ್ದಿಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ; ದಕ್ಷಿಣ ಕನ್ನಡ ಅಭ್ಯರ್ಥಿಯಾಗಿ ಪದ್ಮರಾಜ್, ಉಡುಪಿ-ಚಿಕ್ಕಮಗಳೂರು ಅಭ್ಯರ್ಥಿಯಾಗಿ...

ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ; ದಕ್ಷಿಣ ಕನ್ನಡ ಅಭ್ಯರ್ಥಿಯಾಗಿ ಪದ್ಮರಾಜ್, ಉಡುಪಿ-ಚಿಕ್ಕಮಗಳೂರು ಅಭ್ಯರ್ಥಿಯಾಗಿ ಜಯಪ್ರಕಾಶ್ ಹೆಗ್ಡೆ

- Advertisement -
- Advertisement -

ಬೆಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ಅವರಿಗೆ ಟಿಕೆಟ್ ನೀಡಲಾಗಿದೆ.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ ಅವರಿಗೆ ಟಿಕೆಟ್ ‌ನೀಡಲಾಗಿದೆ.

ಇಂದು‌ ಎಐಸಿಸಿಯಿಂದ 57 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಬಿಡುಗಡೆ ಮಾಡಿದ್ದು, ಕರ್ನಾಟಕದ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.

ಇನ್ನು ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ, ಬೀದರ್ ಕ್ಷೇತ್ರಕ್ಕೆ ಸಚಿವ ಈಶ್ವರ್ ಖಂಡ್ರೆ ಪುತ್ರ ಸಾಗರ್ ಖಂಡ್ರೆ, ಚಿಕ್ಕೋಡಿ ಕ್ಷೇತ್ರಕ್ಕೆ ಸಚಿವ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ,‌ ಬೆಳಗಾವಿ ಕ್ಷೇತ್ರದಿಂದ ಸಚಿವೆ ಲಕ್ಷ್ಕೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್, ಬಾಗಲಕೋಟೆ ಕ್ಷೇತ್ರದಿಂದ ಸಚಿವ ಶಿವಾನಂದ ಪಾಟೀಲ್ ಪುತ್ರಿ ಸಂಯುಕ್ತಾ ಪಾಟೀಲ್, ಕಲ್ಬುರ್ಗಿ ಕ್ಷೇತ್ರದಿಂದ ಸಚಿವ ಪ್ರಿಯಾಂಕ್ ಖರ್ಗೆ ಭಾವ ರಾಧಾಕೃಷ್ಣ, ದಾವಣಗೆರೆ ಕ್ಷೇತ್ರದಿಂದ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಪತ್ನಿ ಪ್ರಭಾ ಮಲ್ಲಿಕಾರ್ಜುನ ಅವರಿಗೆ ಟಿಕೆಟ್ ನೀಡಲಾಗಿದೆ.

- Advertisement -

Latest News

error: Content is protected !!