Wednesday, October 14, 2026
Homeತಾಜಾ ಸುದ್ದಿಪಿಎಸ್ ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣ : ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್...

ಪಿಎಸ್ ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣ : ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ವಿರುದ್ಧ ಆರೋಪ

- Advertisement -
- Advertisement -

ಬೆಂಗಳೂರು: 545 ಪಿಎಸ್ ಐ ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ಈಗ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ್ ನಾರಾಯಣ ವಿರುದ್ಧ ನೇರ ಆರೋಪ ಕೇಳಿ ಬಂದಿದೆ.

ಸಚಿವ ಅಶ್ವತ್ಥ್ ನಾರಾಯಣ ವಿರುದ್ಧ ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಆರೋಪ ಮಾಡಿದ್ದು, ಅಶ್ವತ್ಥ್ ನಾರಾಯಣ ಸಹೋದರ ಸತೀಶ್ ಭಾಗಿ ಆಗಿದ್ದಾರೆ ಎಂದು ಸುದ್ದಿ ಗೋಷ್ಠಿಯಲ್ಲಿ ಆರೋಪಿಸಿದ್ದಾರೆ.

ಪಿಎಸ್ ಐ ಪರೀಕ್ಷೆ ಬರೆದಿದ್ದ ದರ್ಶನ್ ಗೌಡ ಎಂಬ ಅಭ್ಯರ್ಥಿಯ ಆಯ್ಕೆ ಹಿಂದೆ ಅಶ್ವಥ್ ನಾರಾಯಣ ಸಹೋದರ ಸತೀಶ್ ಕೈವಾಡವಿದೆ ಎಂದು ಆರೋಪಿಸಿರುವ ಕಾಂಗ್ರೆಸ್, ಕೂಡಲೇ ಸಚಿವ ಅಶ್ವತ್ಥ್ ನಾರಾಯಣ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದೆ.

ಆದರೆ ಸಹೋದರನ ಕೈವಾಡದ ಬಗ್ಗೆ ಕಾಂಗ್ರೆಸ್ ಮಾಡಿರುವ ಆರೋಪವನ್ನು ಸಚಿವ ಡಾ. ಅಶ್ವಥ್ ನಾರಾಯಣ ತಳ್ಳಿ ಹಾಕಿದ್ದಾರೆ.

- Advertisement -

Latest News

error: Content is protected !!