ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಕೂಡಾ ಕಾಂಗ್ರೆಸ್ ಪಕ್ಷ ಗ್ಯಾರಂಟಿ ಘೋಷಣೆ ಮಾಡಿದೆ. ಮಹಿಳೆಯರಿಗೆ ಮಾಸಿಕ ಎರಡು ಸಾವಿರ ರೂಪಾಯಿ ಹಣ ನೀಡುವ ಭರವಸೆಯನ್ನು ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ.
ಕರ್ನಾಟಕದ ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಚೆನ್ನೈ ನಲ್ಲಿರುವ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಇಂದು ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ.
ಮಹಿಳೆಯರಿಗೆ ಮಾಸಿಕ ಎರಡು ಸಾವಿರ ರೂಪಾಯಿ, ಮೂರು ಲಕ್ಷ ಸರ್ಕಾರಿ ಹುದ್ದೆ ಭರ್ತಿ, ಭೂ ರಹಿತ ರೈತರಿಗೆ ವಾರ್ಷಿಕ 6 ಸಾವಿರ ರೂಪಾಯಿ, ಧಾರ್ಮಿಕ ಪ್ರವಾಸೋದ್ಯಮಕ್ಕೆ ವಿಶೇಷ ಕಾರ್ಯಕ್ರಮ ಮತ್ತು ಭೂ ದಾಖಲೆ ಹಂಚಿಕೆ ಸೇರಿದಂತೆ ಹಲವು ಭರವಸೆಗಳನ್ನು ಚುನಾವಣಾ ಪ್ರಣಾಳಿಕೆ ಒಳಗೊಂಡಿದೆ.
ತಮಿಳುನಾಡಿನಲ್ಲಿ ಧಾರ್ಮಿಕ ಪ್ರವಾಸೋದ್ಯಮಕ್ಕೆ ಹೆಚ್ಚಿನ ಪ್ರಾಮುಖ್ಯತೆ ಇದ್ದು, ತಮಿಳುನಾಡಿನ ದೇವಾಲಯಗಳತ್ತ ಪ್ರವಾಸಿಗರನ್ನು ಆಕರ್ಷಿಸಲು ಕಾರ್ಯಕ್ರಮ ರೂಪಿಸಲಾಗುವುದು ಎಂದು ಡಿ.ಕೆ. ಶಿವಕುಮಾರ್ ಪ್ರಣಾಳಿಕೆ ಬಿಡುಗಡೆಯ ಬಳಿಕ ಹೇಳಿಕೆ ನೀಡಿದ್ದಾರೆ.
ಏಪ್ರಿಲ್ 23 ರಂದು ತಮಿಳುನಾಡಿನಲ್ಲಿ ಮತದಾನ ನಡೆಯಲಿದ್ದು, ಕಾಂಗ್ರೆಸ್ ಪಕ್ಷ ಡಿಎಂಕೆ ಜೊತೆಗಿನ ಮೈತ್ರಿಕೂಟದಲ್ಲಿ ಚುನಾವಣೆ ಎದುರಿಸುತ್ತಿದೆ.


