Monday, April 29, 2024
Homeತಾಜಾ ಸುದ್ದಿವಿಧಾನ ಪರಿಷತ್ ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ

ವಿಧಾನ ಪರಿಷತ್ ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ

spot_img
- Advertisement -
- Advertisement -

ಬೆಂಗಳೂರು: ವಿಧಾನ ಪರಿಷತ್ ನ ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಪ್ರಕಟಿಸಿದೆ.

ಮಾಜಿ‌ ಎಂಎಲ್ಸಿ ಆಯನೂರು ಮಂಜುನಾಥ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದ್ದು, ಜೂನ್ ತಿಂಗಳಲ್ಲಿ ಚುನಾವಣೆ ನಡೆಯಲಿದೆ.

ನೈಋತ್ಯ ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್ ನ ಬಿಜೆಪಿ ಸದಸ್ಯರಾಗಿದ್ದ ಆಯನೂರು ಮಂಜುನಾಥ್ ವಿಧಾನಸಭಾ ಚುನಾವಣೆಯಲ್ಲಿ ಶಿವಮೊಗ್ಗ ನಗರ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು.

ಆದರೆ ಟಿಕೆಟ್ ನಿರಾಕರಿಸಲ್ಪಟ್ಟ ಕಾರಣ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಸ್ಫರ್ಧಿಸಿ ಸೋಲನುಭವಿಸಿದ್ದರು.

ಬಳಿಕ ಕಾಂಗ್ರೆಸ್ ಸೇರ್ಪಡೆಯಾಗಿದ್ದ ಆಯನೂರು ಮಂಜುನಾಥ್ ಈಗ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಫರ್ಧಿಸುತ್ತಿದ್ದಾರೆ.

ನೈಋತ್ಯ ಪದವೀಧರ ಕ್ಷೇತ್ರ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳು, ದಾವಣಗೆರೆ ‌ಜಿಲ್ಲೆಯ ಹರಪನಹಳ್ಳಿ ಮತ್ತು ಹೊನ್ನಾಳಿ ತಾಲೂಕುಗಳ ವ್ಯಾಪ್ತಿಯನ್ನು ಒಳಗೊಂಡಿದೆ.

- Advertisement -
spot_img

Latest News

error: Content is protected !!