Saturday, June 6, 2026
Homeಕರಾವಳಿಮಂಗಳೂರಿನಲ್ಲಿ ಸುರ್ಜೇವಾಲಾ ನೇತೃತ್ವದಲ್ಲಿ ದಕ್ಷಿಣಕನ್ನಡ ಜಿಲ್ಲಾ ಕಾಂಗ್ರೆಸ್ ನಾಯಕರ ಸಭೆ

ಮಂಗಳೂರಿನಲ್ಲಿ ಸುರ್ಜೇವಾಲಾ ನೇತೃತ್ವದಲ್ಲಿ ದಕ್ಷಿಣಕನ್ನಡ ಜಿಲ್ಲಾ ಕಾಂಗ್ರೆಸ್ ನಾಯಕರ ಸಭೆ

- Advertisement -
- Advertisement -

ಮಂಗಳೂರು: ವಿಧಾನಸಭಾ ಚುನಾವಣಾ ಸಿದ್ಧತೆಯ ಹಿನ್ನೆಲೆಯಲ್ಲಿ ದ‌ಕ್ಷಿಣ ಕನ್ನಡ ಜಿಲ್ಲಾ ‌ಕಾಂಗ್ರೆಸ್ ಪ್ರಮುಖ ನಾಯಕರ ಸಭೆ ಮಂಗಳೂರಿನಲ್ಲಿ ಇಂದು ನಡೆಯಿತು.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ನೇತೃತ್ವದಲ್ಲಿ ಮಂಗಳೂರಿನ ಬೆಂದೂರ್ ಬಳಿಯ ಖಾಸಗಿ ಸಭಾಂಗಣದಲ್ಲಿ ಸಭೆ ನಡೆಯಿತು.

ಸಭೆಯಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್, ವಿಧಾನಸಭೆ ವಿಪಕ್ಷ ಉಪನಾಯಕ ಯು.ಟಿ. ಖಾದರ್ ಸೇರಿದಂತೆ ಜಿಲ್ಲೆಯ ಪ್ರಮುಖ ನಾಯಕರುಗಳು ಪಾಲ್ಗೊಂಡಿದ್ದರು.

ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾ ನಾಯಕರ ಜೊತೆ ಸಮಾಲೋಚನೆ ನಡೆಸಲಾಗಿದ್ದು, ಟಿಕೆಟ್ ಆಕಾಂಕ್ಷಿಗಳು ಕೂಡಾ ಸಭೆಯಲ್ಲಿ ಭಾಗವಹಿಸಿದ್ದರು.

- Advertisement -

Latest News

error: Content is protected !!