Monday, June 8, 2026
Homeಕರಾವಳಿನಕಲಿ ಮತದಾರರ ಹೆಸರು ಬಿಟ್ಟಿದ್ದರಿಂದ ಕಾಂಗ್ರೆಸ್ಸಿಗರಿಗೆ ಗೆಲುವು ಅಸಾಧ್ಯ ಅನಿಸಿದೆ: ಅದಕ್ಕಾಗಿ ಬಿಜೆಪಿ ಮೇಲೆ ಆರೋಪ...

ನಕಲಿ ಮತದಾರರ ಹೆಸರು ಬಿಟ್ಟಿದ್ದರಿಂದ ಕಾಂಗ್ರೆಸ್ಸಿಗರಿಗೆ ಗೆಲುವು ಅಸಾಧ್ಯ ಅನಿಸಿದೆ: ಅದಕ್ಕಾಗಿ ಬಿಜೆಪಿ ಮೇಲೆ ಆರೋಪ ಮಾಡುತ್ತಿದ್ದಾರೆ: ಕಟೀಲ್‌ ಟ್ವೀಟ್

- Advertisement -
- Advertisement -

ಮಂಗಳೂರು: ಚಿಲುಮೆಯಿಂದ ಮತದಾರರ ಪಟ್ಟಿ ಕಳವು ಪ್ರಕರಣದಲ್ಲಿ ಚಿಲುಮೆ ಸಂಸ್ಥೆ ಜೊತೆ ರಾಜಕಾರಣಿಗಳು ಶಾಮೀಲಾಗಿದ್ದಾರೆ ಎಂದು ಕಾಂಗ್ರೆಸ್‌ ಆರೋಪ ಮಾಡಿದೆ. ಈ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸರಣಿ ಟ್ವೀಟ್​ ಮೂಲಕ ಕಾಂಗ್ರೆಸ್ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.

ನಮ್ಮ ಪಕ್ಷದ ರಾಜ್ಯ ಸರಕಾರ ಪಾರದರ್ಶಕವಾಗಿರುವುದರಿಂದ ದೂರು ಬಂದ ಹಿನ್ನೆಲೆಯಲ್ಲಿ ಚಿಲುಮೆಗೆ ನೀಡಿರುವ ಅನುಮತಿಯನ್ನು ಬಿಬಿಎಂಪಿ ರದ್ದುಪಡಿಸಿದೆ.

ಆದರೆ ಸೋಲಿನ ಭೀತಿಯಿಂದ ಸಿದ್ದರಾಮಯ್ಯ ಅನಗತ್ಯ ರಾಜಕೀಯ ಮಾಡುತ್ತಿದ್ದಾರೆ. ಅವರದ್ದೇ ಆಡಳಿತದ ಅವಧಿಯಲ್ಲಿ ಚಿಲುಮೆ ಸಂಸ್ಥೆ ಮೂಲಕ ಮತದಾರರ ಮಾಹಿತಿ ದುರ್ಬಳಕೆ ಬಗ್ಗೆನೂ ತನಿಖೆ ನಡೆಯಲಿದೆ. ಇದು ನಕಲಿ ಮತದಾರರ ಹೆಸರು ಬಿಟ್ಟು ಹೋಗಿರುವುದರಿಂದ ಕಾಂಗ್ರೆಸ್ಸಿಗರಿಗೆ ತಾವು ಗೆಲ್ಲುವುದು ಸಾಧ್ಯವಿಲ್ಲ ಎಂದು ಅನಿಸುತ್ತಿದೆ. ಅದಕ್ಕಾಗಿ ಬಿಜೆಪಿ ಮೇಲೆ ಆರೋಪ ಹಾಕುತ್ತಿದ್ದಾರೆ”, ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್​ ಕುಮಾರ್​ ಕಟೀಲ್ ಟ್ವೀಟ್​ ಮಾಡಿದ್ದಾರೆ.

- Advertisement -

Latest News

error: Content is protected !!