Saturday, June 6, 2026
Homeತಾಜಾ ಸುದ್ದಿಪುತ್ತೂರಿನಿಂದ ವಿಟ್ಲದವರೆಗೆ ಕಾಂಗ್ರೆಸ್‌ ಕಾಲ್ನಡಿಗೆ ಜಾಥಾ

ಪುತ್ತೂರಿನಿಂದ ವಿಟ್ಲದವರೆಗೆ ಕಾಂಗ್ರೆಸ್‌ ಕಾಲ್ನಡಿಗೆ ಜಾಥಾ

- Advertisement -
- Advertisement -

ವಿಟ್ಲ : ಸ್ವಾತಂತ್ರ್ಯದ ಅಮೃತಮಹೋತ್ಸವದ ಪ್ರಯುಕ್ತ ಪುತ್ತೂರಿನಿಂದ ವಿಟ್ಲ ತನಕ, ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಹಾಗೂ ಪುತ್ತೂರು ಬ್ಲಾಕ್ ಕಾಂಗ್ರೆಸ್ ನ  ಆಶ್ರಯದಲ್ಲಿ ಇಂದು ಕಾಲ್ನಡಿಗೆ ಜಾಥಾ ನಡೆಯಿತು.

ಪಾದಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವ ವಿನಯ್‌ ಸೊರಕೆ, ನೈಜ ಇತಿಹಾಸವನ್ನು ಎಂದಿಗೂ ತಿರುಚಿ ನಂಬಿಸಲು ಸಾಧ್ಯವಿಲ್ಲ. ಬ್ರಿಟಿಷರಿಗೆ ಕ್ಷಮಾಪಣೆ ಪತ್ರ ಬರೆದವರು, ರಾಷ್ಟ್ರಪಿತ ಗಾಂಧೀಜಿಯವರಿಗೆ ಗುಂಡಿಟ್ಟವರ ಬೆಂಬಲಿಗರಿಂದ ನಾವು ದೇಶಪ್ರೇಮವನ್ನು ಕಲಿಯಬೇಕಿಲ್ಲ ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದರು.

ಅವರು ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಪುತ್ತೂರು ಹಾಗೂ ವಿಟ್ಲ -ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸೋಮವಾರ ಹಮ್ಮಿಕೊಂಡ ಪುತ್ತೂರಿನಿಂದ ವಿಟ್ಲದ ತನಕ ನಡೆದ `ಸ್ವಾತಂತ್ರ್ಯದ ನಡಿಗೆ’ ಪಾದಯಾತ್ರೆ ಕಾರ್ಯಕ್ರಮದಲ್ಲಿ ದರ್ಬೆಯಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಪುತ್ತೂರಿನ ದರ್ಬೆ  ವೃತ್ತದಿಂದ ಆರಂಭವಾದ ಕಾಲ್ನಡಿಗೆ  ಜಾಥವು ಕಬಕ ಮಾರ್ಗವಾಗಿ ಅಳಕೆಮಜಲು ಕಂಬಳಬೆಟ್ಟು ಆಗಿ‌ ಸಾಯಂಕಾಲ ವಿಟ್ಲ ತಲುಪಿತು.

- Advertisement -

Latest News

error: Content is protected !!