Sunday, April 28, 2024
Homeಕರಾವಳಿಉಡುಪಿಉಡುಪಿ: ಭಜರಂಗದಳ ಸಂಘಟನೆ ನಿಷೇಧಿಸುವ ಪ್ರಸ್ತಾಪ ಕಾಂಗ್ರೆಸ್ ಮುಂದಿಲ್ಲ: ವೀರಪ್ಪ ಮೊಯ್ಲಿ ‌

ಉಡುಪಿ: ಭಜರಂಗದಳ ಸಂಘಟನೆ ನಿಷೇಧಿಸುವ ಪ್ರಸ್ತಾಪ ಕಾಂಗ್ರೆಸ್ ಮುಂದಿಲ್ಲ: ವೀರಪ್ಪ ಮೊಯ್ಲಿ ‌

spot_img
- Advertisement -
- Advertisement -

ಉಡುಪಿ: ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇಧದ ವಿಚಾರ ಕೈ ನಾಯಕರಿಗೆ ತಲೆನೋವಾಗಿ ಪರಿಣಮಿಸಿದೆ. ರಾಜ್ಯದಲ್ಲೀಗ ಈ ವಿಚಾರ ಭಾರೀ ಸದ್ದು ಮಾಡುತ್ತಿದೆ. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ವೀರಪ್ಪ ಮೊಯ್ಲಿ ಭಜರಂಗದಳ ನಿಷೇಧಿಸುವ ಯಾವುದೇ ಪ್ರಸ್ತಾವನೆ ಕಾಂಗ್ರೆಸ್ ಮುಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ನಾವು ಈ ಹಿಂದೆ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಲೂ ಭಜರಂಗದಳ ನಿಷೇಧಿಸುವ ಪ್ರಸ್ತಾವನೆ ಇರಲಿಲ್ಲ. ರಾಜ್ಯ ಸರಕಾರ ಅಂತಹ ಸಂಘಟನೆಗಳನ್ನು ನಿಷೇಧಿಸುವ ಹಕ್ಕು ಹೊಂದಿಲ್ಲ ಎಂದು ಮೊಯ್ಲಿ ಸ್ಪಷ್ಟನೆ ನೀಡಿದ್ದಾರೆ.

- Advertisement -
spot_img

Latest News

error: Content is protected !!