Wednesday, June 24, 2026
Homeತಾಜಾ ಸುದ್ದಿಕಾಂಗ್ರೆಸ್ ಹೈಕಮಾಂಡ್ ಸಿಎಂ ಬದಲಾವಣೆ ವಿಚಾರದಲ್ಲಿ ಗೌರವಯುತವಾಗಿ ನಡೆದುಕೊಳ್ಳಬೇಕು; ಕಾಂಗ್ರೆಸ್ ಹೈಕಮಾಂಡ್ ಗೆ ವಾಟಾಳ್ ನಾಗರಾಜ್...

ಕಾಂಗ್ರೆಸ್ ಹೈಕಮಾಂಡ್ ಸಿಎಂ ಬದಲಾವಣೆ ವಿಚಾರದಲ್ಲಿ ಗೌರವಯುತವಾಗಿ ನಡೆದುಕೊಳ್ಳಬೇಕು; ಕಾಂಗ್ರೆಸ್ ಹೈಕಮಾಂಡ್ ಗೆ ವಾಟಾಳ್ ನಾಗರಾಜ್ ವಾರ್ನಿಂಗ್

- Advertisement -
- Advertisement -

 ಮೈಸೂರು: ಕಾಂಗ್ರೆಸ್ ಹೈಕಮಾಂಡ್ ಸಿಎಂ ಬದಲಾವಣೆ ವಿಚಾರದಲ್ಲಿ ಗೌರವಯುತವಾಗಿ ನಡೆದುಕೊಳ್ಳಬೇಕು ಎಂದು ಕಾಂಗ್ರೆಸ್ ಹೈಕಮಾಂಡ್ ಗೆ ವಾಟಾಳ್ ನಾಗರಾಜ್ ವಾರ್ನಿಂಗ್ ಕೊಟ್ಟಿದ್ದಾರೆ.

ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಪಟ್ಟಂತೆ ನಂಜನಗೂಡು ಶ್ರೀಕಂಠೇಶ್ವರ ದೇವಾಲಯದಲ್ಲಿ ಮಾತನಾಡಿದ ಅವರು ದುಡುಕಿದರೆ ರಾಜ್ಯಕ್ಕೆ ಅಪಾಯ ಗ್ಯಾರಂಟಿ ಎಂದು ಕಾಂಗ್ರೆಸ್ ಹೈಕಮಾಂಡ್ ಗೆ ವಾಟಾಳ್ ನಾಗರಾಜ್ ವಾರ್ನಿಂಗ್ ಕೊಟ್ಟಿದ್ದಾರೆ. ಸಿಎಂ ಬದಲಾವಣೆ ಅಧಿಕಾರಿಗಳ ವರ್ಗಾವಣೆ ಮಾಡಿದಂತಲ್ಲ. ಸಿದ್ದರಾಮಯ್ಯನಂತಹ ವ್ಯಕ್ತಿ ಮೂರು ಪಕ್ಷದಲ್ಲೂ ಇಲ್ಲ.ಬದಲಾವಣೆ ವಿಚಾರವನ್ನು ಸುಲಭವಾಗಿ ಪರಿಗಣಿಸಬೇಡಿ. ಸಿದ್ದರಾಮಯ್ಯರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಸಿದರೆ ರಾಜ್ಯಕ್ಕೆ ಘೋರ ಅನ್ಯಾಯವಾಗುತ್ತದೆ. ಅಲ್ಲದೆ ಇದು ಅಪಾಯಕಾರಿ ಬೆಳವಣಿಗೆ. ರಾಜ್ಯದಲ್ಲಿ ಜನ ದಂಗೆ ಏಳುತ್ತಾರೆ. ನನ್ನ ಅಭಿಪ್ರಾಯದಂತೆ ಸಿದ್ದರಾಮಯ್ಯ ಆರೋಗ್ಯವಾಗಿರುವವರೆಗೂ ಸಿಎಂ ಆಗಿ ಮುಂದುವರಿಸಿ ಎಂದು ಸಲಹ ಕೊಟ್ಟಿದ್ದಾರೆ.

- Advertisement -

Latest News

error: Content is protected !!