Friday, October 11, 2024
Homeಕರಾವಳಿಕೇರಳ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಕದ ತಟ್ಟಿದ ಯುವ ಕಾಂಗ್ರೆಸ್ ನಾಯಕ ಮಿಥುನ್‌ ರೈ

ಕೇರಳ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಕದ ತಟ್ಟಿದ ಯುವ ಕಾಂಗ್ರೆಸ್ ನಾಯಕ ಮಿಥುನ್‌ ರೈ

spot_img
- Advertisement -
- Advertisement -

ಮಂಗಳೂರು ಮತ್ತು ಕಾಸರಗೋಡಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ತೆರವುಗೊಳಿಸಬೇಕೆಂದು ಕೇರಳ ಹೈಕೋರ್ಟ್‌ ನೀಡಿರುವ ಆದೇಶವನ್ನು ಪ್ರಶ್ನಿಸಿ ಯುವ ಕಾಂಗ್ರೆಸ್ ಮುಖಂಡ ಮಿಥುನ್‌ ರೈ ಇಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಕೇರಳದ ಕಾಸರಗೋಡಿನಲ್ಲಿ ಕೋವಿಡ್‌-19 ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು, ಅಲ್ಲಿನ ಜನರು ಪರೀಕ್ಷೆ ಹಾಗೂ ತಪಾಸಣೆಗೆಂದು ಮಂಗಳೂರಿಗೆ ಬರುತ್ತಿದ್ದಾರೆ. ಅದು ಮಂಗಳೂರಿನ ಆರೋಗ್ಯ ಸಂಸ್ಥೆಗಳು ಮತ್ತು ವೈದ್ಯರ ಮೇಲೆ ಹೆಚ್ಚಿನ ಪರಿಣಾಮ ಬೀರಲಿದೆ ಎಂದು ಮಿಥುನ್‌ ರೈ ಸಲ್ಲಿಸಿರುವ ಅರ್ಜಿಯಲ್ಲಿ ಹೇಳಲಾಗಿದೆ.

I have filed a special leave petition in the Supreme Court of India – Civil Appelette Juridistiction through my Counsel…

Posted by Mithun Rai on Thursday, 2 April 2020

ಜಿಲ್ಲೆಯ ಬಗ್ಗೆ ಇರುವ ಮಿಥುನ್ ರೈ ಗಿರುವ ಕಾಳಜಿಯ ಬಗ್ಗೆ ಸಂಸದ ನಳಿನ್ ಕುಮಾರ್ ಧನ್ಯವಾದ ತಿಳಿಸಿದ್ದಾರೆ. ಕಾಸರಗೋಡಿನಿಂದ ಹೆಚ್ಚಿನ ಜನರು ಬರುತ್ತಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಜನರಲ್ಲಿ ಆತಂಕ ಉಂಟಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.


ಕರ್ನಾಟಕ ಸರ್ಕಾರ ಕಾಸರಗೋಡು ಮತ್ತು ಮಂಗಳೂರು ನಡುವೆ ಸಂಚಾರ ಕಲ್ಪಿಸುವ ರಸ್ತೆಗೆ ಅಲ್ಪಾವಧಿ ತಡೆ ಹೇರಿತ್ತು. ಅದು ದಕ್ಷಿಣ ಕನ್ನಡ ಜನರ ಹಿತದೃಷ್ಟಿಯ ಹಿನ್ನೆಲೆಯಲ್ಲಿ ಉತ್ತಮ ತೀರ್ಮಾನವಾಗಿತ್ತು. ಆದರೆ, ಕೇರಳ ಹೈಕೋರ್ಟ್‌ ಈ ರಸ್ತೆ ತಡೆಯನ್ನು ತೆರವುಗೊಳಿಸಲು ಸೂಚನೆ ನೀಡಿದೆ. ಇದರ ಬಗ್ಗೆ ವಿಚಾರಣೆ ನಡೆಸಿ ತೀರ್ಪು ನೀಡಬೇಕೆಂದು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಈ ಅರ್ಜಿಯ ವಿಚಾರಣೆಯನ್ನು ಎಲ್‌. ನಾಗೇಶ್ವರ ರಾವ್‌ ಮತ್ತು ದೀಪಕ್‌ ಗುಪ್ತಾ ಅವರನ್ನು ಒಳಗೊಂಡ ಪೀಠವು ಇಂದು ಕೈಗೆತ್ತಿಕೊಳ್ಳಲಿದೆ.

- Advertisement -
spot_img

Latest News

error: Content is protected !!