Saturday, May 18, 2024
Homeಕರಾವಳಿನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಪುತ್ತೂರಿನಲ್ಲಿ ಬಿಜೆಪಿ ಸೇರಿದ ಕಾಂಗ್ರೆಸ್ ನ ಪ್ರಭಾವಿ ಲೀಡರ್ಸ್

ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಪುತ್ತೂರಿನಲ್ಲಿ ಬಿಜೆಪಿ ಸೇರಿದ ಕಾಂಗ್ರೆಸ್ ನ ಪ್ರಭಾವಿ ಲೀಡರ್ಸ್

spot_img
- Advertisement -
- Advertisement -

ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ನೇತೃತ್ವದಲ್ಲಿ ನಿನ್ನೆ ನಡೆದ ಪುತ್ತೂರು ನಗರ  ನಗರ ಮಂಡಲದ ಬೂತ್ ಪ್ರಮುಖರ ಸಭೆಯಲ್ಲಿ ಕಾಂಗ್ರೆಸ್ ನ ಪ್ರಭಾವಿ ನಾಯಕರುಗಳು ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡಾಗಿದ್ದಾರೆ.

ಕಲ್ಲೇಗದ ಭಾರತ್ ಮಾತಾ ಸಮುದಾಯ ಭವನದಲ್ಲಿ ನಡೆದ ಪ್ರಮುಖರ ಸಭೆಯಲ್ಲಿ ಕಾಂಗ್ರೆಸ್ ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷ ಯು.ಲೋಕೇಶ್ ಹೆಗ್ಡೆ, ನಗರ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ, ನಗರ ಸಭಾ ಮಾಜಿ ಸದಸ್ಯೆ ಸ್ವರ್ಣಲತಾ ಹೆಗ್ಡೆ, ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ, ಆರ್ಯಾಪು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಸತೀಶ್ ನಾಕ್ ಪರ್ಲಡ್ಕ, ಸಾಮೆತ್ತಡ್ಕ ಗೋಪಾಲಕೃಷ್ಣ ಭಟ್  ಬಿಜೆಪಿಗೆ ಸೇರ್ಪಡೆಯಾದರು.

ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಪಕ್ಷದ ಧ್ವಜ ನೀಡಿ ಸ್ವಾಗತಿಸಿದರು. ಶಾಸಕ ಸಂಜೀವ ಮಠಂದೂರು, ನಗರ ಸಭಾ ಅಧ್ಯಕ್ಷ ಜೀವಂಧರ್ ಜೈನ್, ಪೂಡಾ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲದ ಅಧ್ಯಕ್ಷ ಪಿ.ಜಿ ಜಗನ್ನಿವಾಸ ರಾವ್ ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!