Friday, June 27, 2025
Homeಕರಾವಳಿಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ ಆರೋಗ್ಯ ಸ್ಥಿತಿ ಗಂಭೀರ ಹಿನ್ನೆಲೆ : ಮಂಗಳೂರಿನಲ್ಲಿ...

ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ ಆರೋಗ್ಯ ಸ್ಥಿತಿ ಗಂಭೀರ ಹಿನ್ನೆಲೆ : ಮಂಗಳೂರಿನಲ್ಲಿ ನಾಳೆ ನಡೆಯಬೇಕಿದ್ದ ಕಾಂಗ್ರೆಸ್ ನಾಯಕರ ಸಭೆ ರದ್ದು

spot_img
- Advertisement -
- Advertisement -

ಮಂಗಳೂರು: ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ ಆರೋಗ್ಯ ಸ್ಥಿತಿ ಗಂಭೀರವಾಗಿರುವ ಹಿನ್ನೆಲೆ ಮಂಗಳೂರಿನಲ್ಲಿ ನಾಳೆ ನಡೆಯಬೇಕಿದ್ದ ಕಾಂಗ್ರೆಸ್ ನಾಯಕರ ಸಭೆಯನ್ನು ರದ್ದು ಮಾಡಲಾಗಿದೆ.ಸಭೆ ರದ್ದುಗೊಳಿಸಿದ ಬಗ್ಗೆ ಕಾಂಗ್ರೆಸ್ ಪತ್ರಿಕಾ ಪ್ರಕಟಣೆ ಹೊರಡಿಸಿದೆ.

ಈ ಸಭೆಯಲ್ಲಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಭಾಗವಹಿಸಬೇಕಿತ್ತು. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಪಕ್ಷದ ನಾಯಕರು ಸಹ ಭಾಗಿಯಾಗಲಿದ್ದರು. ಸಭೆ ರದ್ದುಗೊಳಿಸಿ ಆಸ್ಕರ್ ಆರೋಗ್ಯ ವಿಚಾರಿಸಲು ಇಂದು ಮಂಗಳೂರಿಗೆ  ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗಮಿಸಲಿದ್ದಾರೆ. ಸಂಜೆ 6 ಗಂಟೆ ಹೊತ್ತಿಗೆ ಮಂಗಳೂರಿಗೆ ಡಿ.ಕೆ.ಶಿವಕುಮಾರ್ ಬರಲಿದ್ದಾರೆ ಎನ್ನಲಾಗಿದೆ.

ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಆಸ್ಕರ್ ಫರ್ನಾಂಡೀಸ್ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಮೆದುಳಿಗೆ ಏಟು ಬಿದ್ದು ಸದ್ಯ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು ಐಸಿಯುನಲ್ಲಿ ಚಿಕಿತ್ಸೆ ನೀಲಾಗುತ್ತಿದೆ.

- Advertisement -
spot_img

Latest News

error: Content is protected !!