Sunday, April 28, 2024
Homeಕರಾವಳಿಮಂಗಳೂರು ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಗದ್ದಲ; ಎರಡು ಬಾರಿ ಮುಂದೂಡಿಕೆ

ಮಂಗಳೂರು ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಗದ್ದಲ; ಎರಡು ಬಾರಿ ಮುಂದೂಡಿಕೆ

spot_img
- Advertisement -
- Advertisement -

ಮಂಗಳೂರು: ಆಸ್ತಿ ತೆರಿಗೆ ಹೆಚ್ಚಳ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಮಂಗಳೂರು ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಗದ್ದಲ ಉಂಟಾಗಿದೆ.

ಕಾಂಗ್ರೆಸ್ ಸದಸ್ಯರ ಪ್ರತಿಭಟನೆಯ ಹಿನ್ನೆಲೆಯಲ್ಲಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಎರಡೆರಡು ಬಾರಿ ಸಭೆಯನ್ನು ಮುಂದೂಡಬೇಕಾಯಿತು.

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳಕ್ಕೆ ಕಾಂಗ್ರೆಸ್ ಸದಸ್ಯರು ವಿರೋಧ ವ್ಯಕ್ತಪಡಿಸಿದರು. ಅಲ್ಲದೇ ಧಿಕ್ಕಾರ ಘೋಷಣೆಗಳನ್ನು ಕೂಗಿ ಸದನದ ಬಾವಿಗಿಳಿದು ಪ್ರತಿಭಟನೆಯನ್ನೂ ನಡೆಸಿದರು.

ಪ್ಲಕಾರ್ಡ್ ಗಳನ್ನು ಹಿಡಿದು ಕಾಂಗ್ರೆಸ್ ಸದಸ್ಯರು ಸದನದ ಬಾವಿಗೆ ಇಳಿದು ತೀವ್ರ ಪ್ರತಿಭಟನೆ ನಡೆಸಿದಾಗ ಬಿಜೆಪಿ ಸದಸ್ಯರು ಕೂಡಾ ಸದನದ ಬಾವಿಗಿಳಿದು ರಾಜ್ಯ ಸರ್ಕಾರಕ್ಕೆ ಧಿಕ್ಕಾರ ಘೋಷಣೆಯ ಕೂಗಿದರು.

ಈ ಕಾರಣದಿಂದಾಗಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆ ಎರಡು ಬಾರಿ ಮುಂದೂಡುವಂತಾಯಿತು.

- Advertisement -
spot_img

Latest News

error: Content is protected !!