- Advertisement -
- Advertisement -
ಮಂಗಳೂರು: ಕೊರೋನಾ ಸೋಂಕಿತರ ಚಿಕಿತ್ಸೆಗಾಗಿ ಮೀಸಲಿಟ್ಟಿರುವ ವೆನ್ಲಾಕ್ ಜಿಲ್ಲಾಸ್ಪತ್ರೆಗೆ ಜಿಲ್ಲೆಯ ಕಾಂಗ್ರೆಸ್ ಶಾಸಕರು ಭೇಟಿ ನೀಡಿ, ವೈದ್ಯಾಧಿಕಾರಿಗಳು, ಮತ್ತು ದಾದಿಯರೊಂದಿಗೆ ಸಮಾಲೋಚನೆ ನಡೆಸಿದರು.
ಕಾಂಗ್ರೆಸ್ ಶಾಸಕ ಯು.ಟಿ ಖಾದರ್, ವಿಧಾನಪರಿಷತ್ ಸದಸ್ಯ ಮತ್ತು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಮತ್ತು ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಅವರನ್ನು ಒಳಗೊಂಡ ಕಾಂಗ್ರೆಸ್ ನಾಯಕರ ತಂಡ ಆಸ್ಪತ್ರೆಗೆ ಭೇಟಿ ನೀಡಿ ಕೊರೋನಾ ಸೋಂಕಿತರ ಚಿಕಿತ್ಸೆಗಾಗಿ ಮಾಡಿರುವ ವ್ಯವಸ್ಥೆ, ಸಮರ್ಪಕ ವೈದ್ಯರು ಮತ್ತು ದಾದಿಯರು ಸಿಬ್ಬಂದಿಗಳು ಲಭ್ಯರಾಗಿದ್ದಾರೆಯೇ ಎಂದು ಮಾಹಿತಿ ಪಡೆದು ಆಸ್ಪತ್ರೆಗಳ ವೈದ್ಯರೊಂದಿಗೆ ಚರ್ಚೆ ನಡೆಸಿದರು.
- Advertisement -