Wednesday, June 24, 2026
Homeತಾಜಾ ಸುದ್ದಿಧರ್ಮಸ್ಥಳ ವಿರುದ್ಧ ಅಪಪ್ರಚಾರ ಖಂಡಿಸಿ ಕಾಂಗ್ರೆಸ್‌ ಶಾಸಕರಿಂದ ಧರ್ಮಸ್ಥಳ ಯಾತ್ರೆ

ಧರ್ಮಸ್ಥಳ ವಿರುದ್ಧ ಅಪಪ್ರಚಾರ ಖಂಡಿಸಿ ಕಾಂಗ್ರೆಸ್‌ ಶಾಸಕರಿಂದ ಧರ್ಮಸ್ಥಳ ಯಾತ್ರೆ

- Advertisement -
- Advertisement -

ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರು ಧರ್ಮಸ್ಥಳ ಯಾತ್ರೆ ಕೈಗೊಂಡಿದ್ದು, ಚಾಮರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಹರೀಶ್‌ಗೌಡ ನೇತೃತ್ವದಲ್ಲಿ ಯಾತ್ರೆ ಕೈಗೊಳ್ಳಲಾಗಿದ್ದು, ಇಂದು ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಿಂದ ಯಾತ್ರೆ ಆರಂಭವಾಗಿದೆ.

ಯಾತ್ರೆಗೆ ಚಾಲನೆಯನ್ನ ಶಾಸಕ ತನ್ವೀರ್‌ ಸೇಠ್‌ ನೀಡಿದ್ದು, 30ಕ್ಕೂ ಹೆಚ್ಚು ಬಸ್‌ಗಳು ಹಾಗೂ ಕಾರುಗಳಲ್ಲಿ 2000 ಸಾವಿರಕ್ಕೂ ಹೆಚ್ಚು ಜನರು ಧರ್ಮಸ್ಥಳಕ್ಕೆ ಯಾತ್ರೆ ಕೈಗೊಂಡಿದ್ದಾರೆ.

ಪ್ರತಿ ವಾರ್ಡ್‌ನಿಂದ ಬಸ್ ವ್ಯವಸ್ಥೆ ಮಾಡಿರುವ ಶಾಸಕ ಹರೀಶ್‌ ಗೌಡ ಅವರು, ಇಂದು ಧರ್ಮಸ್ಥಳಕ್ಕೆ ತೆರಳುವ ಜನರು ಅಲ್ಲೇ ತಂಗಲಿದ್ದಾರೆ.

ನಾಳೆ ಬೆಳಿಗ್ಗೆ ಮಂಜುನಾಥ ಹಾಗೂ ಅಣ್ಣಪ್ಪಸ್ವಾಮಿ ದರ್ಶನ ಪಡೆದು ಯಾತ್ರಿಗಳು ವಾಪಸ್ಸಾಗಲಿದ್ದು, ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷರುಗಳು, ಮುಖಂಡರು ಹಾಗೂ ಕಾರ್ಯಕರ್ತರು ಭಾಗಿಯಾಗಿದ್ದಾರೆ.

- Advertisement -

Latest News

error: Content is protected !!