Sunday, May 19, 2024
Homeತಾಜಾ ಸುದ್ದಿರಾಜ್ಯಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ತಿಯಾಗಿ ಮಲ್ಲಿಕಾರ್ಜುನ ಖರ್ಗೆ ಘೋಷಣೆ

ರಾಜ್ಯಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ತಿಯಾಗಿ ಮಲ್ಲಿಕಾರ್ಜುನ ಖರ್ಗೆ ಘೋಷಣೆ

spot_img
- Advertisement -
- Advertisement -

ಬೆಂಗಳೂರು: ಈ ತಿಂಗಳ 19 ರಂದು ನಡೆಯಲಿರುವ ಚುನಾವಣೆಯಲ್ಲಿ ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಈ ಬಾರಿ ಘಟಾನುಘಟಿಗಳು ಸ್ಪರ್ಧಿಸಲಿದ್ದು, ಇದೇ ಮೊದಲ ಬಾರಿಗೆ ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರು ಮೇಲ್ಮನೆ ಪ್ರವೇಶಿಸುವುದು ಬಹತೇಕ ಖಚಿತವಾಗಿದೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಶುಕ್ರವಾರ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಧಿಕೃತವಾಗಿ ಕಾಂಗ್ರೆಸ್ ಟಿಕೆಟ್ ಘೋಷಿಸಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಲು ನನಗೆ ಅವಕಾಶ ಮಾಡಿಕೊಟ್ಟ ಸೋನಿಯಾಗಾಂಧಿ, ರಾಹುಲ್ ಗಾಂಧಿಯವರಿಗೆ ಧನ್ಯವಾದ ತಿಳಿಸುತ್ತೇನೆ. ಸಿದ್ದರಾಮಯ್ಯ, ಡಿಕೆಶಿವಕುಮಾರ್ ಸೇರಿದಂತೆ ಎಲ್ಲಾ ನಾಯಕರು ಒಮ್ಮತದಿಂದ ನನ್ನನ್ನ ಆಯ್ಕೆಮಾಡಿದ್ದಾರೆ. ಅವರಿಗೂ ಧನ್ಯವಾದ ಅರ್ಪಿಸುತ್ತೇನೆ ಎಂದು ಹೇಳಿದರು.

 ಜೆಡಿಎಸ್ ನ ಕುಪೇಂದ್ರ ರೆಡ್ಡಿ, ಬಿಜೆಪಿಯ ಪ್ರಭಾಕರ್ ಕೋರೆ, ಕಾಂಗ್ರೆಸ್ ನ ರಾಜೀವ್ ಗೌಡ,  ಬಿ.ಕೆ.ಹರಿಪ್ರಸಾದ್ ನಿವೃತ್ತಿಯಾಗುತ್ತಿದ್ದಾರೆ. ಇವರ ಸ್ಥಾನಗಳಿಗೆ ಈಗ ಚುನಾವಣೆ ನಡೆಯಲಿದೆ. 

- Advertisement -
spot_img

Latest News

error: Content is protected !!