- Advertisement -
![]()
- Advertisement -
ಮಂಗಳೂರು: ಕೇಂದ್ರ ಸರ್ಕಾರ ಇಡಿ ದುರ್ಬಳಕೆ ಮಾಡುತ್ತಿದೆ ಎಂದು ಆರೋಪಿಸಿ ಮಂಗಳೂರಿನಲ್ಲಿ ಇಂದು ಕಾಂಗ್ರೆಸ್ ಪ್ರತಿಭಟನೆ ನಡೆದಿದೆ.
ಫಳ್ನೀರ್ ಎಸ್.ಎಲ್ ಮಥಾಯಿಸ್ ಪಾರ್ಕ್ ನಿಂದ ಅತ್ತಾವರದ ಐಟಿ ಕಚೇರಿವರೆಗೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ.
ರಸ್ತೆ ಮಧ್ಯೆ ಪ್ರತಿಭಟನಾಕಾರರನ್ನು ತಡೆದ ಪೊಲೀಸರು, ಮಂಗಳೂರಿನ ಐಟಿ ಕಚೇರಿಗೆ ಬಿಗಿ ಭದ್ರತೆ ಒದಗಿಸಿದ್ದಾರೆ.
ಪ್ರತಿಭಟನೆಯಲ್ಲಿ ಮಾಜಿ ಸಚಿವ ರಮಾನಾಥ್ ರೈ, ಮಾಜಿ ಎಂಎಲ್ಸಿ ಐವಾನ್ ಡಿಸೋಜಾ ಭಾಗಿಯಾಗಿದ್ದರು.
ಪ್ರತಿಭಟನೆ ವೇಳೆ ಐಟಿ ಕಚೇರಿಯತ್ತ ನುಗ್ಗಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
- Advertisement -


