Thursday, June 25, 2026
Homeಕರಾವಳಿಮಂಗಳೂರುಎಂಎಲ್ಸಿ ಐವಾನ್ ಡಿಸೋಜಾ ಮನೆಗೆ ಕಲ್ಲು ಪ್ರಕರಣ; ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನಾ ಪಾದಯಾತ್ರೆ

ಎಂಎಲ್ಸಿ ಐವಾನ್ ಡಿಸೋಜಾ ಮನೆಗೆ ಕಲ್ಲು ಪ್ರಕರಣ; ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನಾ ಪಾದಯಾತ್ರೆ

- Advertisement -
- Advertisement -

ಮಂಗಳೂರು: ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಇಂದು ಕಾಂಗ್ರೆಸ್ ಮುಖಂಡರು ಪ್ರತಿಭಟನಾ ಮೆರವಣಿಗೆ ನಡೆಸಿದರು.

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ವೆಲೆನ್ಸಿಯಾದಲ್ಲಿರುವ ಐವನ್ ಡಿಸೋಜಾ ಮನೆಯಿಂದ ಪಿವಿಎಸ್ ಸರ್ಕಲ್ ಬಳಿ ಇರುವ ಜಿಲ್ಲಾ ಬಿಜೆಪಿ ಕಚೇರಿವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು.

ಪಾದಯಾತ್ರೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್, ಮಾಜಿ ಶಾಸಕ ಜೆ.ಆರ್. ಲೋಬೋ, ಎಂಎಲ್ಸಿ ಐವಾನ್ ಡಿಸೋಜಾ ಸೇರಿದಂತೆ ಜಿಲ್ಲಾ ಕಾಂಗ್ರೆಸ್ ಮುಖಂಡು ಭಾಗಿಯಾಗಿದ್ದರು.

ಪಾದಯಾತ್ರೆಯುದ್ದಕ್ಕೂ ಬಿಜೆಪಿ ನಾಯಕರ ವಿರುದ್ಧ ಧಿಕ್ಕಾರ ಮತ್ತು ರಾಜ್ಯಪಾಲರ ವಿರುದ್ಧ ಗೋ ಬ್ಯಾಕ್ ಘೋಷಣೆ ಕೂಗಲಾಯಿತು.

ಕಂಕನಾಡಿ ಜಂಕ್ಷನ್ ಬಳಿ ರಸ್ತೆಗೆ ಬ್ಯಾರಿಕೇಡ್ ಅಳವಡಿಸಿ ಪೊಲೀಸರು ಪಾದಯಾತ್ರೆಗೆ ತಡೆ ಒಡ್ಡಿದ ಕಾರಣ ಪಾದಯಾತ್ರೆ ಮೊಟಕುಗೊಳಿಸಿ ಪ್ರತಿಭಟನಾ ಸಭೆ ನಡೆಸಿದರು.

- Advertisement -

Latest News

error: Content is protected !!