Saturday, June 6, 2026
Homeತಾಜಾ ಸುದ್ದಿಪ್ರಧಾನಿ ಮೋದಿ ಮನೆಗೆ ಮುತ್ತಿಗೆ: ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

ಪ್ರಧಾನಿ ಮೋದಿ ಮನೆಗೆ ಮುತ್ತಿಗೆ: ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

- Advertisement -
- Advertisement -

ನವದೆಹಲಿ: ಅಗತ್ಯ ವಸ್ತುಗಳ ಬೆಲೆ ಏರಿಕೆ, ಜಿಎಸ್‌ಟಿ ಏರಿಕೆ ಹಾಗೂ ನಿರುದ್ಯೋಗ ಸಮಸ್ಯೆಗಳಿಂದಾಗಿ ಆಕ್ರೋಶಗೊಂಡಿರುವ ರಾಷ್ಟ್ರೀಯ ಕಾಂಗ್ರೆಸ್ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸುತ್ತಿದೆ.

ಪ್ರತಿಭಟನೆಯ ಭಾಗವಾಗಿ `ಪ್ರಧಾನಿ ಮನೆಗೆ ಘೇರಾವ್’ ಹಾಕಲು ಮುಂದಾಗಿದೆ. ಈಗಾಗಲೇ ಸಂಸತ್ ಭವನದಿಂದ `ಚಲೋ ರಾಷ್ಟ್ರಪತಿ ಭವನ್’ ಮೆರವಣಿಗೆ ಆರಂಭಿಸಿದ್ದು, ಧಿಕ್ಕಾರ ಕೂಗುತ್ತಾ ಕಾಲ್ನಡಿಗೆಯಲ್ಲಿ ಹೊರಟಿದ್ದಾರೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸದಸ್ಯರು ಮತ್ತು ಹಿರಿಯ ನಾಯಕರು ಪ್ರಧಾನಿ ನರೇಂದ್ರ ಮೋದಿ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾಗುತ್ತಿದ್ದಾರೆ. ಕಾಂಗ್ರೆಸ್ ಬೃಹತ್ ಪ್ರತಿಭಟನೆಗೂ ಮುನ್ನವೇ ದೆಹಲಿಯ ಕೆಲ ಭಾಗಗಳಲ್ಲಿ ದೊಡ್ಡ-ದೊಡ್ಡ ಸಭೆ, ಸಮಾರಂಭಗಳನ್ನ ನಿಷೇಧಿಸಿ ನಿಷೇಧಾಜ್ಞೆ ಹೊರಡಿಸಲಾಗಿದೆ. 

- Advertisement -

Latest News

error: Content is protected !!