Friday, June 5, 2026
Homeತಾಜಾ ಸುದ್ದಿರಾಜ್ಯಸಭೆ ಚುನಾವಣೆಯಲ್ಲಿ ದೇವೇಗೌಡರಿಗೆ ಬೆಂಬಲ ಸೂಚಿಸಲು ಸಿದ್ದ ಎಂಬ ಕಾಂಗ್ರೆಸ್

ರಾಜ್ಯಸಭೆ ಚುನಾವಣೆಯಲ್ಲಿ ದೇವೇಗೌಡರಿಗೆ ಬೆಂಬಲ ಸೂಚಿಸಲು ಸಿದ್ದ ಎಂಬ ಕಾಂಗ್ರೆಸ್

- Advertisement -
- Advertisement -

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗೋದು ಖಚಿತವಾಗಿದೆ. ಆಷ್ಟೇ ಅಲ್ಲದೇ ಹೆಚ್ಚುವರಿಯಾಗಿ ಒಂದು ಮತ ಕೂಡ ತಮ್ಮ ಬಳಿ ಹೊಂದಿದೆ. ಇಂತಹ ಹೆಚ್ಚುವರಿ ಮತವನ್ನು ಜೆಡಿಎಸ್ ಗೆ ಅಭ್ಯರ್ಥಿಯಾದಂತ ದೇವೇಗೌಡರಿಗೆ ನೀಡಲು ಕಾಂಗ್ರೆಸ್ ಸಿದ್ದವಿರುವುದಾಗಿ ರಾಜ್ಯ ಉಸ್ತುವಾರಿ ಹೊಣೆಗಾರಿಕೆ ಹೊತ್ತಿರುವಂತ ಕೆಸಿ ವೇಣುಗೋಪಾಸ್ ಒಲವು ತೋರಿದ್ದಾರೆ.

ಕಾಂಗ್ರೆಸ್‌ ನೆರವು ಪಡೆದು ಎಚ್‌.ಡಿ.ದೇವೇಗೌಡರನ್ನು ರಾಜ್ಯಸಭೆ ಚುನಾವಣೆ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ನಿರ್ಧರಿಸಲಾಗಿದೆ ಎಂದು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಕೆ.ಕುಮಾರಸ್ವಾಮಿ ತಿಳಿಸಿದರು.

ರಾಜ್ಯ ಸಭೆಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಭರ್ಜರಿ ತಯಾರಿ ನಡೆಸಿವೆ. ಈಗಾಗಲೇ ಕಾಂಗ್ರೆಸ್ ನಿಂದ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆಯವರನ್ನು ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಿದ್ದರೇ, ಜೆಡಿಎಸ್ ನಿಂದ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರನ್ನು ಕಣಕ್ಕೆ ಇಳಿಸಲಾಗಿದೆ. ಇನ್ನೂ ಬಿಜೆಪಿ ಮಾತ್ರ ಅಭ್ಯರ್ಥಿಗಳ ಘೋಷಣೆ ಮಾಡಿಲ್ಲ.

- Advertisement -

Latest News

error: Content is protected !!