- Advertisement -
- Advertisement -
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ರಾಜ್ಯ ಬಿಜೆಪಿಯ ಕಾಲೆಳೆದಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಮಾಜಿ ಸಿಎಂ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಂಸದೆ ಶೋಭಾ ಕರಂದ್ಲಾಜೆ, ಸಿ ಟಿ ರವಿ ಅವರಿಗೆ ಟಾಂಗ್ ನೀಡಿದೆ.

ಈ ಬಗ್ಗೆ ಟ್ವಿಟ್ ಮಾಡಿರುವಂತ ಕರ್ನಾಟಕ ಕಾಂಗ್ರೆಸ್ ನಳೀನ್ ಕುಮಾರ್ ಕಟೀಲ್ ಅವರೇ ನಿಮ್ಮ ಮನೆಗೂ 200 ಯೂನಿಟ್ ವಿದ್ಯುತ್ ಫ್ರೀ. ಬಸವರಾಜ ಬೊಮ್ಮಾಯಿ ಅವರೆ, ನಿಮ್ಮ ಮನೆಗೂ ಫ್ರೀ! ಶೋಭಾ ಕಂದ್ಲಾಜೆ ಅವರೇ, ನಿಮಗೂ ಪ್ರಯಾಣ ಫ್ರೀ. ಸಿಟಿ ರವಿ ಅವರೇ ನಿಮ್ಮ ಮನೆಯವರಿಗೂ ರೂ.2000 ಫ್ರೀ! ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ, (ಪದವಿ ಪಡೆದಿದ್ದವರಿದ್ರೆ ಮಾತ್ರ)! ಇದು ನಮ್ಮ ಗ್ಯಾರಂಟಿ ಎಂಬುದಾಗಿ ಹೇಳಿದೆ.
- Advertisement -