Sunday, June 7, 2026
Homeಕರಾವಳಿಉಡುಪಿಉಡುಪಿ ಜಿಲ್ಲೆಯಲ್ಲಿ ನನ್ನ ಕಳೆದುಕೊಂಡು ಕಾಂಗ್ರೆಸ್ ಪಶ್ಚಾತ್ತಾಪ ಪಡಲಿದೆ : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್...

ಉಡುಪಿ ಜಿಲ್ಲೆಯಲ್ಲಿ ನನ್ನ ಕಳೆದುಕೊಂಡು ಕಾಂಗ್ರೆಸ್ ಪಶ್ಚಾತ್ತಾಪ ಪಡಲಿದೆ : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ತಿರುಗೇಟು

- Advertisement -
- Advertisement -

ಉಡುಪಿ: ಬಿಜೆಪಿಯಲ್ಲಿ ಪ್ರಮೋದ್ ಮಧ್ವರಾಜ್ ಪಶ್ಚಾತ್ತಾಪ ಪಡಲಿದ್ದಾರೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.‌ ಶಿವಕುಮಾರ್ ಲೇವಡಿಗೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ತಿರುಗೇಟು ನೀಡಿದ್ದಾರೆ.

ಉಡುಪಿಯಲ್ಲಿ ಇಂದು ಮಾತನಾಡಿದ ಪ್ರಮೋದ್ ಮಧ್ವರಾಜ್, ಕಾಂಗ್ರೆಸ್ ಸಂಪ್ರದಾಯಕ್ಕೂ ಬಿಜೆಪಿ ಸಂಪ್ರದಾಯಕ್ಕೂ ಬಹಳಷ್ಟು ವ್ಯತ್ಯಾಸ ಇದೆ, ಬಿಜೆಪಿಯ ಸಂಪ್ರದಾಯವನ್ನು ಡಿ.ಕೆ. ಶಿವಕುಮಾರ್ ಕಲಿಯುವುದು ಒಳ್ಳೆಯದು ಎಂದು ಹೇಳಿದ್ದಾರೆ.

ಅಲ್ಲದೇ ವೇದಿಕೆ ಹುಡುಕಿಕೊಂಡು ಹೋಗುವ ಜಾಯಮಾನ ನನ್ನದಲ್ಲ, ಬಿಜೆಪಿಗೆ ಕಾರ್ಯಕರ್ತನಾಗಿ ಸೇರಿದ್ದೇನೆ, ಕಾರ್ಯಕರ್ತನೊಟ್ಟಿಗೆ ಕುಳಿತುಕೊಳ್ಳುತ್ತೇನೆ,‌ ಇದರಲ್ಲಿ ನನಗೆ ಯಾವ ಮುಜುಗರ, ಬೇಸರ ಇಲ್ಲ ಎಂದು ಹೇಳಿದ್ದಾರೆ.

ಇದಲ್ಲದೇ, ಬಿಜೆಪಿಗೆ ನಾನು ಯೋಚನೆ ಮಾಡಿಯೇ ಸೇರ್ಪಡೆಯಾಗಿದ್ದೇನೆ, ನಾನು ಪಶ್ಚಾತ್ತಾಪ ಪಡುವ ಪ್ರಮೇಯವೇ ಬರುವುದಿಲ್ಲ, ಆದರೆ ಕಾಂಗ್ರೆಸ್ ಪಕ್ಷ , ಉಡುಪಿ ಜಿಲ್ಲೆಯಲ್ಲಿ ನನ್ನನ್ನು ಕಳೆದುಕೊಂಡು ಪಶ್ಚಾತ್ತಾಪ ಪಡುವ ದಿನ ದೂರ ಇಲ್ಲ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕೂಡ ಪಶ್ಚಾತ್ತಾಪ ಪಡುತ್ತದೆ ಎಂದು ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.

- Advertisement -

Latest News

error: Content is protected !!