Thursday, June 4, 2026
Homeತಾಜಾ ಸುದ್ದಿಕರ್ನಾಟಕದಲ್ಲಿ ಕಾಂಗ್ರೆಸ್ಸೇ ಗೆಲ್ಲೋದು : ವಿಪಕ್ಷ ನಾಯಕ ಸಿದ್ದರಾಮಯ್ಯ

ಕರ್ನಾಟಕದಲ್ಲಿ ಕಾಂಗ್ರೆಸ್ಸೇ ಗೆಲ್ಲೋದು : ವಿಪಕ್ಷ ನಾಯಕ ಸಿದ್ದರಾಮಯ್ಯ

- Advertisement -
- Advertisement -

ಬೆಂಗಳೂರು: ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋತಿದ್ರೂ, ರಾಜ್ಯದಲ್ಲಿ ಕಾಂಗ್ರೆಸ್ ಮುಂದೆ ಅಧಿಕಾರಕ್ಕೆ ಬರಲಿದೆ ಅಂತ ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮುಂದಿನ ವರ್ಷ ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆ ಬಗ್ಗೆ ಮಾತನಾಡಿದ ಅವರು, ಒಂದು ರಾಜ್ಯದ ಚುನಾವಣೆ ಫಲಿತಾಂಶ ಮತ್ತೊಂದು ರಾಜ್ಯದ ಮೇಲೆ ಬೀರಲ್ಲ. ಅಲ್ಲದೇ, ರಾಜ್ಯದಲ್ಲಿ ಹಿಂದಿನ ಚುನಾವಣೆಗಳ ರಿಸಲ್ಟ್ ಯಾವುದೇ ಚುನಾವಣೆಗಳ ಮೇಲೆ ಪರಿಣಾಮ ಬೀರಿರಲಿಲ್ಲ.

ಬಿಜೆಪಿ ಅಧಿಕಾರದಲ್ಲಿದ್ದು, ನಾಲ್ಕು ರಾಜ್ಯಗಳಲ್ಲಿ ಗೆಲುವು ಸಾಧಿಸಿದೆ. ಪಂಜಾಬ್‌ನಲ್ಲಿ ನಾವು ಅಧಿಕಾರದಲ್ಲಿದ್ದೆವು. ನಾವು ಅಲ್ಲಿ ಗೆಲ್ಲಬೇಕಿತ್ತು, ಆದರೆ ನಾವು ಮಾಡಿದ ತಪ್ಪಿನಿಂದ ಸೋತಿದ್ದೇವೆ. ಆದ್ರೆ ಕರ್ನಾಟಕದಲ್ಲಿ ಹಾಗಾಗಲ್ಲ ಮುಂದಿನ ವರ್ಷ ನಾವೇ ಅಧಿಕಾರಕ್ಕೆ ಬರೋದು ಅಂತ ಹೇಳಿದ್ದಾರೆ.

- Advertisement -

Latest News

error: Content is protected !!