Wednesday, June 3, 2026
Homeಕರಾವಳಿಬೆಳ್ತಂಗಡಿ ; ಕಳೆಂಜದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

ಬೆಳ್ತಂಗಡಿ ; ಕಳೆಂಜದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

- Advertisement -
- Advertisement -

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರ್ಪಡೆಗೊಳ್ಳುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಇಂದು ದಿನಾಂಕ 26.04.2023 ರಂದು ಕಳೆಂಜ ಗ್ರಾಮದ ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ಸೇರ್ಪಡೆಗೊಂಡರು.

ಕಾಂಗ್ರೆಸ್ ಕಾರ್ಯಕರ್ತರಾದ ಬಾಲಕೃಷ್ಣ ಉದ್ರಾಜೆ, ಎಜೆ ಜೋಸೆಫ್ ಕಾಯಡ, ಸಿಬಿನ್ ಎಕೊ ಅವರನ್ನು ಶಾಸಕ ಹರೀಶ್ ಪೂಂಜ ಅವರು ಪಕ್ಷದ ಧ್ವಜ ನೀಡುವ ಮೂಲಕ ಬಿಜೆಪಿಗೆ ಬರಮಾಡಿಕೊಂಡರು.ಈ ವೇಳೆ ಅಭ್ಯರ್ಥಿ ಪ್ರಮುಖ್ ಜಯಾನಂದ ಗೌಡ, ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯೋಗೀಶ್ ಅಲಂಬಿಲ, ಕಳೆಂಜ ಶಕ್ತಿ ಕೇಂದ್ರದ ಅಧ್ಯಕ್ಷ ಹರೀಶ್ ಕೆ.ಬಿ. ಕೊಯ್ಲ, ಕಳೆಂಜ ಶಕ್ತಿಕೇಂದ್ರದ ಚುನಾವಣಾ ಪ್ರಭಾರಿ ಧನಂಜಯ ಗೌಡ, ಕಳೆಂಜ ಪಂಚಾಯತ್ ಅಧ್ಯಕ್ಷರಾದ ಎ.ಪಿ. ಪ್ರಸನ್ನ ಮತ್ತು ಜನಪ್ರತಿನಿಧಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -

Latest News

error: Content is protected !!