Thursday, June 4, 2026
Homeಕರಾವಳಿನಳೀನ್ ಕುಮಾರ್ ಕಟೀಲ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ:ಬಿಜೆಪಿ ರಾಜ್ಯ ಕಚೇರಿಗೆ ಮುತ್ತಿಗೆ ಯತ್ನ

ನಳೀನ್ ಕುಮಾರ್ ಕಟೀಲ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ:ಬಿಜೆಪಿ ರಾಜ್ಯ ಕಚೇರಿಗೆ ಮುತ್ತಿಗೆ ಯತ್ನ

- Advertisement -
- Advertisement -

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿರುದ್ದ ಇಂದು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ರಾಜ್ಯ ಕಚೇರಿಗೆ ಮುತ್ತಿಗೆ ಯತ್ನ ನಡೆಸಿದರು.

ಕಾಂಗ್ರೆಸ್ ನಾಯಕರ ವಿರುದ್ಧ ನಳೀನ್ ಕುಮಾರ್ ಕಟೀಲ್ ನೀಡಿದ್ದ ಹೇಳಿಕೆ ವಿರೋಧಿಸಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ‌ ಮುತ್ತಿಗೆ ಯತ್ನ ನಡೆಯಿತು

ಕಾಂಗ್ರೆಸ್ ನಾಯಕರ ಬಗ್ಗೆ ಕಟೀಲ್ ಅವಹೇಳನಕಾರಿ ಹೇಳಿಕೆ ಕೊಟ್ಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಕಾರ್ಯಕರ್ತರು, ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿದರು.

ಅರೆ ಹುಚ್ಚ ನಳಿನ್ ಕುಮಾರ್, ಕಟೀಲ್ ಗೆ ಧಿಕ್ಕಾರ ಎಂದು ಬಿಜೆಪಿ ರಾಜ್ಯ ಕಚೇರಿ ಎದುರು ಘೋಷಣೆ ಕೂಗಿದ ಕಾಂಗ್ರೆಸ್ ಕಾರ್ಯಕರ್ತರನ್ನು ಬಳಿಕ ಪೊಲೀಸರು ವಶಕ್ಕೆ ಪಡೆದರು.

- Advertisement -

Latest News

error: Content is protected !!