Wednesday, June 3, 2026
Homeಕರಾವಳಿಉಡುಪಿಉಡುಪಿ ಜಿಲ್ಲಾ ಉಸ್ತುವಾರಿ ಸಚಿವರ ಎದುರಿನಲ್ಲೇ ಪಕ್ಷದ ಮುಖಂಡರಿಗೆ ಕಾಂಗ್ರೆಸ್ ಕಾರ್ಯಕರ್ತರ ತರಾಟೆ

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರ ಎದುರಿನಲ್ಲೇ ಪಕ್ಷದ ಮುಖಂಡರಿಗೆ ಕಾಂಗ್ರೆಸ್ ಕಾರ್ಯಕರ್ತರ ತರಾಟೆ

- Advertisement -
- Advertisement -

ಉಡುಪಿ: ಉಡುಪಿ‌ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಣ್ಮೀ ಹೆಬ್ಬಾಳ್ಕರ್ ಸಮ್ಮುಖದಲ್ಲಿಯೇ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರ ನಡುವೆ ಕುಂದಾಪುರದಲ್ಲಿ ಮಾತಿನ ಜಟಾಪಟಿ ನಡೆದಿದೆ.

ಕುಂದಾಪುರ ತಾಲೂಕಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರಿಂದ ಅಕ್ರೋಶ ವ್ಯಕ್ತವಾಗಿದ್ದು, ಚುನಾವಣೆ ಸಮಯದಲ್ಲಿ ಮಾತ್ರ ಕಾರ್ಯಕರ್ತರ ನೆನಪಾಗುತ್ತದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ

ಉಡುಪಿ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂದು ಪಕ್ಷದ ಮುಖಂಡರನ್ನು ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡಿದ್ದಾರೆ.

ಆರ್.ಎನ್.‌ ಶೆಟ್ಟಿ ಭವನದಲ್ಲಿ ನಡೆದ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಜಿಲ್ಲಾ‌ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಭಾಗಿಯಾಗಿದ್ದರು.

- Advertisement -

Latest News

error: Content is protected !!