Thursday, June 4, 2026
Homeಕರಾವಳಿಉಡುಪಿಉಡುಪಿ: ಕಳಪೆ ಕಾಮಗಾರಿಯಿಂದಾಗಿ ಮಳೆಗೆ ನೀರು ಪಾಲಾದ ಸಂಪರ್ಕ ರಸ್ತೆ

ಉಡುಪಿ: ಕಳಪೆ ಕಾಮಗಾರಿಯಿಂದಾಗಿ ಮಳೆಗೆ ನೀರು ಪಾಲಾದ ಸಂಪರ್ಕ ರಸ್ತೆ

- Advertisement -
- Advertisement -

ಉಡುಪಿ: ವ್ಯಾಪಕವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಬೈಂದೂರು ತಾಲೂಕಿನಲ್ಲಿ ಸಂಪರ್ಕ ರಸ್ತೆ ನೀರುಪಾಲಾಗಿದೆ.

ಉಡುಪಿ ಜಿಲ್ಲೆಯ ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ತಗ್ಗರ್ಸೆ ಗ್ರಾಮದಲ್ಲಿನ ಸಂಪರ್ಕ ರಸ್ತೆ‌ ಕಾಮಗಾರಿ ಮುಗಿದ ಒಂದು ವರ್ಷದಲ್ಲಿ ಮಳೆಗೆ ಕೊಚ್ಚಿ ಹೋದಂತಾಗಿದೆ.

ರಸ್ತೆಯ ಕಾಮಗಾರಿಗಾಗಿ ಬೈಂದೂರು ಪಟ್ಟಣ ಪಂಚಾಯತ್ ನಿಂದ ಮೂರು ಲಕ್ಷ ರೂಪಾಯಿ ಬಿಡುಗಡೆ ಮಾಡಲಾಗಿತ್ತು. ಆದರೆ ಕಳಪೆ ಕಾಮಗಾರಿ ನಡೆದ ಪರಿಣಾಮ ಸಂಪರ್ಕ ರಸ್ತೆಗೆ ಹಾಕಲಾಗಿದ್ದ ಮಣ್ಣು ಮಳೆಗೆ ಕೊಚ್ಚಿ ಹೋಗಿದೆ.

ಕಳೆದ ಮೂರು ದಿನಗಳಿಂದ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕೆಯ ಕ್ರಮವಾಗಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಡಳಿತ ಇಂದು ರಜೆ ಘೋಷಿಸಿದೆ.

- Advertisement -

Latest News

error: Content is protected !!