- Advertisement -
![]()
- Advertisement -
ಮಲ್ಪೆ: ವಸಿಷ್ಠ ಸಿಂಹ ನಟನೆಯ ‘ಲವ್ ಲಿ’ ಸಿನಿಮಾ ಚಿತ್ರೀಕರಣಕ್ಕೆಂದೇ ಪಡುಕರೆಯ ಕಡಲ ತೀರದಲ್ಲಿ ಒಂದು ಕೋಟಿ ವೆಚ್ಚದಲ್ಲಿ ಮನೆಯನ್ನು ನಿರ್ಮಾಣ ಮಾಡಲಾಗಿದೆ. ಕೇವಲ 25 ದಿನದಲ್ಲಿ ಈ ಮನೆ ನಿರ್ಮಾಣ ಮಾಡಲಾಗಿದ್ದು, ಕಳೆದ ಹತ್ತು ದಿನಗಳಿಂದ ಚಿತ್ರೀಕರಣ ಭರದಿಂದ ಸಾಗುತ್ತಿದೆ.
ವಸಿಷ್ಠ ಸಿಂಹ, ಸಾಧುಕೋಕಿಲ, ನಾಯಕಿ ಸ್ಟೆಫಿ ಪಟೇಲ್ ಸೇರಿದಂತೆ ಹಲವರು ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಸಿಲಿಕಾನ್ ಸಿಟಿಯಲ್ಲಿ ಮೊದಲ ಹಾಗೂ ಎರಡನೇ ಶೆಡ್ಯೂಲ್ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಮಲ್ಪೆಯ ಪಡುಕರೆಯಲ್ಲಿ ಮೂರನೇ ಹಂತದ ಚಿತ್ರೀಕರಣದಲ್ಲಿ ತೊಡಗಿದೆ.
- Advertisement -


