ಮಂಗಳೂರು: ಅನಧಿಕೃತವಾಗಿ ಆಟೋ ರಿಕ್ಷಾ ಪಾರ್ಕ್ಅನ್ನು ನಿರ್ಮಾಣ ಮಾಡಿ ಬೀದಿ ಬದಿಯ ಮಹಿಳಾ ವ್ಯಾಪಾರಿಯೊಬ್ಬರಿಗೆ ಕಿರುಕುಳ ನೀಡುತ್ತಿದ್ದ ಕಾರಣದಿಂದಾಗಿ, ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಆ.22 ರ ಶುಕ್ರವಾರ ಬೆಳಕಿಗೆ ಬಂದಿದೆ.
ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನ ಶಾಲಿನಿ (48ವರ್ಷ) ಎನ್ನಲಾಗಿದೆ.
ಶಾಲಿನಿ ಅವರ ವ್ಯಾಪಾರಕ್ಕೆ ಆಟೋ ರಿಕ್ಷಾ ಚಾಲಕರ ಸಂಘ ಮತ್ತು ಪಾಲಿಕೆ ಅಧಿಕಾರಿಗಳು ಕಳೆದ 1 ತಿಂಗಳಿಂದ ನಿರಂತರವಾಗಿ ತೊಂದರೆ ನೀಡುತ್ತಿದ್ದು, ಅವರ ವ್ಯಾಪಾರಕ್ಕೂ ಅಡ್ಡಿ ಪಡಿಸುತ್ತಿದ್ದರು. ಪಾಲಿಕೆ ಅಧಿಕಾರಿಗಳು ಆಟೋ ಪಾರ್ಕಿಗೆ ಅನುಮತಿ ನೀಡದಿದ್ದರೂ ರಾಜಕೀಯ ಒತ್ತಡದಿಂದ ತೆರವುಗೊಳಿಸಲು ಬಲವಂತಪಡಿಸಲಾಗುತ್ತಿತ್ತು ಎನ್ನಲಾಗಿದೆ. ಇದರಿಂದಾಗಿ ಮಹಿಳೆಗೆ ವ್ಯಾಪಾರದಲ್ಲಿ ಅಪಾರ ನಷ್ಟವಾಗಿದ್ದು, ಅವರ ಕಿರುಕುಳ ತಾಳಲಾರದೆ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಇದೀಗ ಮಹಿಳೆಯ ಪರಿಸ್ಥಿತಿ ಗಂಭೀರವಾಗಿದ್ದು, ನಗರದ ಖಾಸಗಿ ಆಸ್ಪತ್ರೆಯಲ್ಲಿ ಐ.ಸಿ.ಯು. ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.


