Friday, May 3, 2024
Homeಇತರಕೊಯಿಲ: ರಾಮಕುಂಜ ಗ್ರಾಮದಲ್ಲಿ ಗೋಶಾಲೆ ನಿರ್ಮಾಣಕ್ಕೆ 98 ಎಕರೆ ಪ್ರದೇಶ ಗುರುತು...!

ಕೊಯಿಲ: ರಾಮಕುಂಜ ಗ್ರಾಮದಲ್ಲಿ ಗೋಶಾಲೆ ನಿರ್ಮಾಣಕ್ಕೆ 98 ಎಕರೆ ಪ್ರದೇಶ ಗುರುತು…!

spot_img
- Advertisement -
- Advertisement -

ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಯಿಲ ರಾಮಕುಂಜ ಗ್ರಾಮದಲ್ಲಿ ಗೋಶಾಲೆ ನಿರ್ಮಾಣಕ್ಕೆ 98 ಎಕರೆ ಪ್ರದೇಶವನ್ನು ಗುರುತಿಸಲಾಗಿದ್ದು ಅ. 1ರಂದು ಸ್ಥಳ ಪರಿಶೀಲಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ದ.ಕ.ಉಸ್ತುವಾರಿ ಸಚಿವ ಎಸ್.ಅಂಗಾರ ತಿಳಿಸಿದರು.

ಅವರು ದ.ಕ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಪ್ರಾಣಿ ದಯಾ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ದ.ಕ.ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ., ಪಾಲಿಕ್ಲಿನಿಕ್‌ನ ಉಪನಿರ್ದೇಶಕ ರಾಮಪ್ರಕಾಶ್ .ಡಿ , ಪಶು ಸಂಗೋಪನೆ ಮತ್ತು ಪಶು ವೈದ್ಯಕೀಯ ಇಲಾಖೆಯ ಉಪನಿರ್ದೇಶಕ ಡಾ| ಟಿ.ಜಿ. ಪ್ರಸನ್ನ ಕುಮಾರ್, ಎಸ್‌ಕೆಡಿಆರ್‌ಡಿಪಿ ಯೋಜನಾಧಿಕಾರಿ ಲವಕುಮಾರ್ ಎಚ್. ಆರ್., ಕುಕ್ಕೆ ಶ್ರೀ ಸುಬ್ರಹ್ಮಣ ದೇವಸ್ಥಾನದ ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ಪುಷ್ಪಲತಾ, ವ್ಯವಸ್ಥಾಪಕ ಸಮಿತಿ ಅಧ್ಯಕ್ಷ ಮೋಹನರಾಮ್ ಸುಳ್ಯ ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!