ಮಂಗಳೂರು : ನಗರದಲ್ಲಿ ಅತಿ ದೊಡ್ಡ ಟೆಕ್ ಪಾರ್ಕ್ ನಿರ್ಮಾಣದ ಪ್ರಸ್ತಾಪ ರಾಜ್ಯ ಸರ್ಕಾರದ ಮುಂದಿದ್ದು, ಟೆಕ್ ಪಾರ್ಕ್ ಗಳು ಸ್ಥಾಪಿತವಾದರೆ ಮಂಗಳೂರು ಸಿಲಿಕಾನ್ ಬೀಚ್ ಎಂಬ ಹೆಸರನ್ನು ಪಡೆಯಲಿದೆ.
ಈ ಬಗ್ಗೆ ರಾಜ್ಯದ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ, ಟೆಕ್ಅ ಪಾರ್ಕ್ ನ ಅನುಮೋದನೆಗಾಗಿ ಮುಂದಿನ ವಾರ ಸಚಿವ ಸಂಪುಟ ಮುಂದಿಟ್ಟು ಚರ್ಚೆ ನಡೆಸಲಾಗುವುದು. ಮಂಗಳೂರಿನ ಅಭಿವೃದ್ಧಿಯ ನಿಟ್ಟಿನಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಪಕ್ಷಭೇದವನ್ನ ಮರೆತು ಕಾರ್ಯ ನಿರ್ವಹಿಸಬೇಕಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ನಂತರದಲ್ಲಿ ಟೆಕ್ ಪಾರ್ಕ್ ಸ್ಥಾಪಿಸುವ ಕುರಿತು ಮಾತನಾಡಿ, “ಮಂಗಳೂರಿನಲ್ಲಿ ಕಿಯೋನಿಕ್ಸ್ ಅಧೀನದ 3.25 ಎಕರೆ ಭೂಮಿಯಲ್ಲಿ ಟೆಕ್ ಪಾರ್ಕ್ ನಿರ್ಮಿಸಲಾಗುತಿದ್ದು, ಯೋಜನೆಗೆ 3,500 ಕೋಟಿ ರೂ.ಗಳ ಅವಶ್ಯಕತೆಯಿದೆ. ಎಲ್ಲಾ ರೀತಿಯ ಮೂಲ ಸೌಕರ್ಯದೊಂದಿಗೆ ಟೆಕ್ ಪಾರ್ಕ್ ಅಸ್ತಿತ್ವಕ್ಕೆ ಬರಲಿದ್ದು, ಮುಂದಿನ ಐದು ವರ್ಷದೊಳಗೆ ಮಂಗಳೂರನ್ನು D3 ಕ್ಷೇತ್ರದಲ್ಲಿ ಮತ್ತೊಂದು ಬೆಂಗಳೂರು ಆಗಿ ರೂಪಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದ್ದಾರೆ.


