Monday, June 29, 2026
Homeತಾಜಾ ಸುದ್ದಿಬಂಟ್ವಾಳ : ಮಾಣಿಗುತ್ತು ಶ್ರೀ ಉಳ್ಳಾಲ್ತಿ, ಬೆಮ್ಮೆರ್, ಗುಡ್ಡೆಚಾಮುಂಡಿ, ಪಂಜುರ್ಲಿ, ಮಲೆಕೊರತಿ ದೈವಗಳ ಧರ್ಮಚಾವಡಿಯ ಜೀರ್ಣೋದ್ಧಾರದ...

ಬಂಟ್ವಾಳ : ಮಾಣಿಗುತ್ತು ಶ್ರೀ ಉಳ್ಳಾಲ್ತಿ, ಬೆಮ್ಮೆರ್, ಗುಡ್ಡೆಚಾಮುಂಡಿ, ಪಂಜುರ್ಲಿ, ಮಲೆಕೊರತಿ ದೈವಗಳ ಧರ್ಮಚಾವಡಿಯ ಜೀರ್ಣೋದ್ಧಾರದ ಸಲುವಾಗಿ ಗ್ರಾಮಸ್ಥರ ಸಮಾಲೋಚನಾ ಸಭೆ

- Advertisement -
- Advertisement -

ಬಂಟ್ವಾಳ ತಾಲೂಕು ಮಾಣಿ ಗ್ರಾಮದ ಮಾಣಿಗುತ್ತು ಶ್ರೀ ಉಳ್ಳಾಲ್ತಿ, ಬೆಮ್ಮೆರ್, ಗುಡ್ಡೆಚಾಮುಂಡಿ, ಪಂಜುರ್ಲಿ, ಮಲೆಕೊರತಿ ದೈವಗಳ ಧರ್ಮಚಾವಡಿಯ ಜೀರ್ಣೋದ್ಧಾರದ ಸಲುವಾಗಿ ಗ್ರಾಮಸ್ಥರ ಸಮಾಲೋಚನಾ ಸಭೆಯು ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಆಡಳಿತ ಮೊಕ್ತೇಸರ ಮಾಣಿಗುತ್ತು ಸಚಿನ್ ರೈಯವರ ಅಧ್ಯಕ್ಷತೆಯಲ್ಲಿ ಜರುಗಿತು.

 ಗ್ರಾಮಸ್ಥರ ಸಲಹೆ ಸೂಚನೆಗಳೊಂದಿಗೆ ಜೀರ್ಣೋದ್ಧಾರಕ್ಕೆ ಸಂಬಂಧಪಟ್ಟು ವಿಚಾರವಿನಿಮಯವನ್ನು ಮಾಡಲಾಯಿತು. ಮತ್ತು ನೂತನ ಜೀರ್ಣೋದ್ಧಾರ ಸಮಿತಿಗೆ ಪದಾಧಿಕಾರಿಗಳನ್ನು ಮತ್ತು ಸದಸ್ಯರನ್ನು ನೇಮಿಸಲಾಯಿತು.

 ಗುಡ್ಡ ಶೆಟ್ಟಿ ಯಾನೆ ರತ್ನಾಕರ ಭಂಡಾರಿ ಅರೆಬೆಟ್ಟು, ಸಂತೋಷ್ ಕುಮಾರ್ ಶೆಟ್ಟಿ ಅರೆಬೆಟ್ಟು ನುಳಿಯಾಲು, ಜಗನ್ನಾಥ ಚೌಟ ಬದಿಗುಡ್ಡೆ, ಹರೀಶ್ ಕುಮಾರ್ ಶೆಟ್ಟಿ ಸಾಗು ಹೊಸಮನೆ, ರಾಮಚಂದ್ರ ಪೂಜಾರಿ ಪಾದೆ, ಲೋಕೇಶ್ ಪೂಜಾರಿ ಪಲ್ಲತ್ತಿಲ, ಗ್ರಾಮದ ಪ್ರಮುಖರು, ಗ್ರಾಮಸ್ಥರು ಉಪಸ್ಥಿತರಿದ್ದರು.  ಬಾಲಕೃಷ್ಣ ಆಳ್ವ ಕೊಡಾಜೆ ಸ್ವಾಗತಿಸಿ,   ನಿರೂಪಿಸಿದರು.

- Advertisement -

Latest News

error: Content is protected !!