Thursday, June 25, 2026
Homeತಾಜಾ ಸುದ್ದಿಮೈಸೂರಿನ ಅಭಿವೃದ್ಧಿಗಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ; ಯದುವೀರ ಒಡೆಯರ್

ಮೈಸೂರಿನ ಅಭಿವೃದ್ಧಿಗಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ; ಯದುವೀರ ಒಡೆಯರ್

- Advertisement -
- Advertisement -

ಬೆಂಗಳೂರು: ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ತಾವು ರಾಜಕೀಯ ಕಣಕ್ಕೆ ಇಳಿಯುತ್ತಿರುವ ಕಾರಣವೇನು ಎಂಬುವುದನ್ನು ತಿಳಿಸಿದ್ದಾರೆ.

ರಾಜ್ಯ ಬಿಜೆಪಿ ಕಾರ್ಯಾಲಯಕ್ಕೆ ಗುರುವಾರ ಭೇಟಿ ನೀಡಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿ, ‘ಅಭಿವೃದ್ಧಿ ಮತ್ತು ಸಾರ್ವಜನಿಕ ಸೇವೆಯ ದೃಷ್ಟಿಕೋನ ಇಟ್ಟುಕೊಂಡು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಲು ನಿರ್ಧರಿಸಿದ್ದೇನೆ. ಅಧಿಕಾರ ಇದ್ದಾಗ ಹೆಚ್ಚಿನ ಅಭಿವೃದ್ಧಿ ಮಾಡಲು ಅವಕಾಶ ಸಿಗುತ್ತದೆ ಎಂದರು.

ಮೈಸೂರಿನ ಅಭಿವೃದ್ಧಿಗೆ ಶ್ರಮಿಸಿರುವ ಪ್ರತಾಪ ಸಿಂಹ ಅವರು ತಮಗೆ ಸಹಕಾರ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಶಾಸಕ ಬಸವರಾಜ ಬೊಮ್ಮಾಯಿ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ, ಕೋಲಾರ ಸಂಸದ ಎಸ್. ಮುನಿಸ್ವಾಮಿ, ಶಾಸಕ ಶರಣು ಸಲಗ‌, ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಗೌಡ, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ ಉಪಸ್ಥಿತರಿದ್ದರು.

- Advertisement -

Latest News

error: Content is protected !!