Sunday, May 19, 2024
Homeಕರಾವಳಿಉಡುಪಿಉಡುಪಿಯಲ್ಲಿ ಹಿಜಾಬ್ ಗಾಗಿ ಮುಂದುವರಿದ ಕಾನೂನು ಹೋರಾಟ: ಇನ್ನೆರಡು ದಿನಗಳಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ

ಉಡುಪಿಯಲ್ಲಿ ಹಿಜಾಬ್ ಗಾಗಿ ಮುಂದುವರಿದ ಕಾನೂನು ಹೋರಾಟ: ಇನ್ನೆರಡು ದಿನಗಳಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ

spot_img
- Advertisement -
- Advertisement -

ಉಡುಪಿ: ಉಡುಪಿಯಲ್ಲಿ ಹಿಜಾಬ್ ಗಾಗಿ ಕಾನೂನು ಹೋರಾಟ ಮುಂದುವರೆದಿದೆ. ಶೀಘ್ರವೇ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ಸಾಧ್ಯತೆ ಕಂಡುಬಂದಿದೆ. ಇನ್ನೆರಡು ದಿನ ಕಾಯಿರಿ ಎಂದು ಅರ್ಜಿದಾರರಿಗೆ ಸುಪ್ರೀಂ ಕೋರ್ಟ್ ಹೇಳಿದೆ. ಸುಪ್ರೀಂಕೋರ್ಟ್ ನ ಈ ನಿರ್ಧಾರವನ್ನು  ಮುಸ್ಲಿಂ ಮುಖಂಡರು ಸ್ವಾಗತಿಸಿದ್ದಾರೆ.

ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಮುಖಂಡ ಹುಸೇನ್ ಕೋಡಿಬೆಂಗ್ರೆ ಈಗಾಗಲೇ ಹೈಕೋರ್ಟ್ ತೀರ್ಪು ಬಂದಿದೆ.ಈ ಬಗ್ಗೆ ಪ್ರಶ್ನಿಸಿ ನಾವು ಉಡುಪಿಯಿಂದ ಸುಪ್ರೀಂಕೋರ್ಟ್ ಮೊರೆ ಹೋಗಿದ್ದೇವೆ.ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರು ನಮ್ಮ ಅರ್ಜಿಯನ್ನು ಸ್ವೀಕರಿಸಿದ್ದಾರೆ. ವಿಚಾರಣೆಗೆ ದಿನಾಂಕವನ್ನು ಕೂಡ ಪಟ್ಟಿಮಾಡಿದ್ದಾರೆ.ಸೋಮವಾರ ಅಥವಾ ಮಂಗಳವಾರ ಈ ಅರ್ಜಿ ವಿಚಾರಣೆಗೆ ಬರಲಿದೆ. ವಿಚಾರಣೆ ಕೈಗೆತ್ತಿಕೊಂಡಿರುವ ನ್ಯಾಯಾಧೀಶರಿಗೆ ಧನ್ಯವಾದಗಳು. ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ದೃಷ್ಟಿಯಿಂದ ಅವರು ಈ‌ ನಿರ್ಧಾರ ಕೈಗೊಂಡಿದ್ದಾರೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

- Advertisement -
spot_img

Latest News

error: Content is protected !!