Wednesday, June 3, 2026
Homeಕರಾವಳಿಉಡುಪಿಉಡುಪಿ: ಮಾದಕ ದ್ರವ್ಯದ ವಿರುದ್ಧ ಮುಂದುವರಿದ ಕಾರ್ಯಾಚರಣೆ: ಹಲವರು ಪೊಲೀಸರ ವಶಕ್ಕೆ

ಉಡುಪಿ: ಮಾದಕ ದ್ರವ್ಯದ ವಿರುದ್ಧ ಮುಂದುವರಿದ ಕಾರ್ಯಾಚರಣೆ: ಹಲವರು ಪೊಲೀಸರ ವಶಕ್ಕೆ

- Advertisement -
- Advertisement -

ಉಡುಪಿ: ಮಾದಕ ದ್ರವ್ಯದ ವಿರುದ್ಧ ಜಿಲ್ಲಾ ಪೊಲೀಸರು ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿ, ಒಟ್ಟು 40 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು ,ಹಲವರನ್ನು ವಶಕ್ಕೆ ಪಡೆದಿದ್ದಾರೆ.

ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳಪು ಬಳಿ ವಿನಯ ನಗರದ ಮುಸ್ತಾಫ್ (30), ಅಶ್ರಫ್(35), ಉಡುಪಿ ನಗರ ಠಾಣಾ ವ್ಯಾಪ್ತಿಯ ಕುತ್ಪಾಡಿ ಗ್ರಾಮದ ಅನಂತಕೃಷ್ಣ ನಗರದ ಬಳಿ ಸ್ಥಳೀಯ ನಿವಾಸಿ ಇರ್ಷಾದ್ ಖಾನ್(32), ನಗರದ ಬೋರ್ಡ್ ಹೈಸ್ಕೂಲ್ ಬಳಿ ಶಿರಿಬೀಡುವಿನ ಶರ್ವೀನ್ (20), ಕುಂಜಿಬೆಟ್ಟು ಎಂಜಿಎಂ ಕಾಲೇಜು ಎದುರು ಮಾರ್ಪಳ್ಳಿಯ ಸಮೀದ್ (20) ಎಂಬವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮಾದಕ ದ್ರವ್ಯದ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತಿದ್ದು  ಈತನಕ ಮೂರು ದಿನಗಳಲ್ಲಿ ಒಟ್ಟು 40 ಮಂದಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಪ್ರವಾಸಿ ತಾಣಗಳು, ಶಿಕ್ಷಣ ಸಂಸ್ಥೆಗಳ ಪರಿಸರ ಸೇರಿದಂತೆ ವಿವಿಧ ಸ್ಥಳಗಳಲ್ಲಿ ವಿಶೇಷ ನಿಗಾ ವಹಿಸಲಾಗುತ್ತಿದ್ದು ಕಾರ್ಯಾಚರಣೆ ಮುಂದುವರೆಯಲಿದೆ.

- Advertisement -

Latest News

error: Content is protected !!