Wednesday, June 24, 2026
Homeಕರಾವಳಿದಕ್ಷಿಣ ಕನ್ನಡದಲ್ಲಿ ಮುಂದುವರಿದ ಮಳೆ: ಜೂನ್ 26ರ ವರೆಗೆ ಆರೆಂಜ್ ಅಲರ್ಟ್

ದಕ್ಷಿಣ ಕನ್ನಡದಲ್ಲಿ ಮುಂದುವರಿದ ಮಳೆ: ಜೂನ್ 26ರ ವರೆಗೆ ಆರೆಂಜ್ ಅಲರ್ಟ್

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ ಬಿಟ್ಟು ಬಿಟ್ಟು ಮಳೆಯಾಗಿದ್ದು, ಮಂಗಳೂರು, ಪುತ್ತೂರು, ಬಂಟ್ವಾಳ, ಉಳ್ಳಾಲ, ಸುರತ್ಕಲ್ ಮತ್ತು ಬೆಳ್ತಂಗಡಿ ಸಹಿತ ಜಿಲ್ಲೆಯಾದ್ಯಂತ ಮಳೆಯಾಗಿದೆ

ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಜೂನ್ 24ರಿಂದ 26ರ ವರೆಗೆ ಜಿಲ್ಲೆಯಲ್ಲಿ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದ್ದು, ಈ ಅವಧಿಯಲ್ಲಿ ಬಿರುಸಿನ ಗಾಳಿ ಹಾಗೂ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ. ನಿರಂತರ ಮಳೆಯ ಹಿನ್ನೆಲೆಯಲ್ಲಿ ತಾಪಮಾನದಲ್ಲಿ ಇಳಿಕೆ ಕಂಡುಬಂದಿದ್ದು, ಮಂಗಳೂರಿನಲ್ಲಿ ಗರಿಷ್ಠ ತಾಪಮಾನ 27.9°C (1.5°C ಇಳಿಕೆ) ಮತ್ತು ಕನಿಷ್ಠ ತಾಪಮಾನ 22.5°C (ವಾಡಿಕೆಗಿಂತ 0.9°C ಇಳಿಕೆ) ದಾಖಲಾಗಿದೆ.

- Advertisement -

Latest News

error: Content is protected !!