Saturday, June 6, 2026
Homeಕರಾವಳಿಪುತ್ತೂರು: ಆರ್ಲಪದವಿನಲ್ಲಿ ಗುತ್ತಿಗೆದಾರ ನೇಣಿಗೆ ಶರಣು

ಪುತ್ತೂರು: ಆರ್ಲಪದವಿನಲ್ಲಿ ಗುತ್ತಿಗೆದಾರ ನೇಣಿಗೆ ಶರಣು

- Advertisement -
- Advertisement -

ಪುತ್ತೂರು: ಮೇಸ್ತ್ರಿ ಕಂ ಗುತ್ತಿಗೆದಾರ ನೇಣಿಗೆ ಶರಣಾಗಿರುವ ಘಟನೆ ಪುತ್ತೂರು ತಾಲೂಕಿನ ಪಾಣಾಜೆ ಗ್ರಾಮದ ಆರ್ಲಪದವಿನಲ್ಲಿ ನಡೆದಿದೆ. ವಿಜಯ್ ಕುಮಾರ್ (38) ಸೋಮವಾರ ಸಂಜೆ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭಾನುವಾರ ಪುತ್ತೂರಿನಲ್ಲಿ ನಡೆದ ಮರಾಠಿ ಸಂಘದ ವಾರ್ಷಿಕ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ವಿಜಯ್ ಕುಮಾರ್ ಅವರಿಗೆ ವಿವಾಹ ನಡೆಸಲು ಮನೆಯವರು ಸಿದ್ಧತೆ ನಡೆಸಿಕೊಂಡಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಪೊಲೀಸರು ಸ್ಥಳಕ್ಕೆ ಆಗಮಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರು ತಂದೆ ಶಿವಪ್ಪ ನಾಯ್ಕ, ತಾಯಿ ಲಲಿತಾ, ಅಣ್ಣ, ಅಕ್ಕ, ಕುಟುಂಬಸ್ಥರನ್ನು ಅಗಲಿದ್ದಾರೆ.

- Advertisement -

Latest News

error: Content is protected !!