Saturday, June 13, 2026
Homeಕರಾವಳಿಮಂಗಳೂರು; ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣ: ಖಾಸಗಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಯನ್ನು ವಶಕ್ಕೆ ಪಡೆದ ಎನ್...

ಮಂಗಳೂರು; ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣ: ಖಾಸಗಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಯನ್ನು ವಶಕ್ಕೆ ಪಡೆದ ಎನ್ ಐ ಎ ಅಧಿಕಾರಿಗಳು

- Advertisement -
- Advertisement -

ಮಂಗಳೂರು;  ನಗರದಲ್ಲಿ ಕೆಲ ದಿನಗಳ ಹಿಂದೆ ನಡೆದ   ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ತನಿಖೆಯನ್ನು ಎನ್‌ಐಎ ಚುರುಕುಗೊಳಿಸಿದೆ. ಈ ಸಂಬಂಧ ನಗರದಲ್ಲಿನ ಪಿ.ಎ ಇಂಜಿನಿಯರಿಂಗ್ ಕಾಲೇಜಿನ ಮೇಲೆ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದು, ಪಿ.ಎ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ತಾಜುದ್ದೀನ್ ಶೇಖ್ ಎಂಬಾತನನ್ನು ವಶಕ್ಕೆ ಪಡೆದಿದೆ.

ಮಂಗಳೂರಿನ ಕುಕ್ಕರ್ ಬಾಂಬ್ ಸ್ಪೋಟಕ ಪ್ರಕರಣ ಸಂಬಂಧ ಉಗ್ರ ಶಾರಿಕ್ ನನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಆತ ನೀಡಿದ ಮಾಹಿತಿಯ ಆಧಾರ ಮೇಲೆ ಇಂದು ಪಿ ಎ ಇಂಜಿನಿಯರಿಂಗ್ ಕಾಲೇಜಿನ ಮೇಲೆ 7 ಎನ್‌ಐಎ ಅಧಿಕಾರಿಗಳ ತಂಡ ದಾಳಿ ನಡೆಸಿದೆ.

ಶಿವಮೊಗ್ಗ ಗ್ರಾಮಾಂತರ ಠಾಣೆಯ ಪೊಲೀಸರು ತುಂಗಾದಡದಲ್ಲಿ ಟ್ರಯಲ್ ಬ್ಲಾಸ್ಟ್ ಸಂಬಂಧ ಮಾಜ್ ಮುನೀರ್ ಬಂಧಿಸಿದ್ದರು. ಈ ಪ್ರಕರಣವನ್ನು ಸರ್ಕಾರ ಎನ್‌ಐಎಗೆ ವಹಿಸಿತ್ತು. ಈ ಸಂಬಂಧ ತನಿಖೆ ನಡೆಸಿದ್ದಂತ ಎನ್‌ಐಎ ಅಧಿಕಾರಿಗಳು, ಮಾಜ್ ಜೊತೆಗೆ ಉಗ್ರರ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಮಂಗಳೂರಿನ ಪಿ.ಎ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬಿಇ ಓದುತ್ತಿದ್ದಂತ ವಿದ್ಯಾರ್ಥಿ ತಾಜುದ್ದೀನ್ ಶೇಖ್ ಎಂಬಾತನನ್ನು ವಶಕ್ಕೆ ಪಡೆದಿದ್ದು ತ‌ನಿಖೆ ಮುಂದುವರೆದಿದೆ.

- Advertisement -

Latest News

error: Content is protected !!