- Advertisement -
- Advertisement -
ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಹಿನ್ನೆಲೆ ಇಂದು ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದ್ರು.
ಬಳಿಕ ಆಸ್ಪತ್ರೆಗೆ ತೆರಳಿ ಆಟೋರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರ ಆರೋಗ್ಯ ವಿಚಾರಿಸಿದರು.
ಈ ವೇಳೆ ಶಾಸಕ ಭರತ್ ಶೆಟ್ಟಿ, ರಾಜ್ಯ ಪೊಲೀಸ್ ಮಹಾನಿರ್ದೇಶಕ ಮತ್ತು ಐಜಿಪಿ ಪ್ರವೀಣ್ ಸೂದ್, ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್., ಐಜಿಪಿ ಚಂದ್ರಗುಪ್ತ, ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಡಿಸಿಪಿ ಅಂಶು ಕುಮಾರ್ ಹಾಗೂ ಇತರ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
- Advertisement -