Thursday, July 16, 2026
Homeಕರಾವಳಿಇಂದು ಸಂಜೆ ಮಂಗಳೂರಿನಲ್ಲಿ  ಅಮಿತ್ ಶಾ ನೇತೃತ್ವದಲ್ಲಿ ಮಂಗಳೂರು ಹಾಗೂ ಶಿವಮೊಗ್ಗ ವಿಭಾಗದ ಕೋರ್‌ ಕಮಿಟಿ...

ಇಂದು ಸಂಜೆ ಮಂಗಳೂರಿನಲ್ಲಿ  ಅಮಿತ್ ಶಾ ನೇತೃತ್ವದಲ್ಲಿ ಮಂಗಳೂರು ಹಾಗೂ ಶಿವಮೊಗ್ಗ ವಿಭಾಗದ ಕೋರ್‌ ಕಮಿಟಿ ಸಭೆ

- Advertisement -
- Advertisement -

ಮಂಗಳೂರು: ಇಂದು ದಕ್ಷಿಣ ಕನ್ನಡ ಜಿಲ್ಲಾ  ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ  ಇಂದು ಸಂಜೆ 5.20ಕ್ಕೆ ಮಂಗಳೂರಿನಲ್ಲಿ ಬಿಜೆಪಿ ಪ್ರಮುಖ ನಾಯಕರ ಕೋರ್‌ ಕಮಿಟಿ ಸಭೆ ನಡೆಯಲಿದೆ. ಮಂಗಳೂರು ಹಾಗೂ ಶಿವಮೊಗ್ಗ ವಿಭಾಗದ ಕೋರ್‌ ಕಮಿಟಿ ಸಭೆ ಇದಾಗಿದೆ.

ಮಂಗಳೂರಿನ ಕೆಂಜಾರು ಬಳಿಯ ಶ್ರೀದೇವಿ ಕಾಲೇಜು ಸಭಾಂಗಣದಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ , ರಾಜ್ಯ ಬಿಜೆಪಿ ಘಟಕ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ.

ಮಂಗಳೂರು ಹಾಗೂ ಶಿವಮೊಗ್ಗ ವಿಭಾಗದ ಬಿಜೆಪಿ ನಾಯಕರು ಕೂಡ ಭಾಗಿಯಾಲಿದ್ದಾರೆ. ಮಂಗಳೂರು ವಿಭಾಗದ ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆ ಹಾಗೂ ಶಿವಮೊಗ್ಗ ವಿಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಉತ್ತರಕನ್ನಡ ನಾಯಕರು ಭಾಗವಹಿಸಲಿದ್ದಾರೆ. ನಂತರ ರಾತ್ರಿ 7.30ಕ್ಕೆ ಮಂಗಳೂರಿನಿಂದ ಅಮಿತ್‌ ಶಾ ಪ್ರಯಾಣ ಬೆಳೆಸಲಿದ್ದಾರೆ.

- Advertisement -

Latest News

error: Content is protected !!