- Advertisement -
- Advertisement -
ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ಹಾಗೆ ಸಾವನ್ನಪ್ಪುತ್ತಿರುವವರ ಸಂಖ್ಯೆಯೂ ಹೆಚ್ಚಾಗ್ತಿದೆ. ಇಂದು ಕೊರೊನಾಗೆ ಇಬ್ಬರು ಬಲಿಯಾಗಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನಾಗೆ ಒಟ್ಟೂ 29 ಮಂದಿ ಸಾವನ್ನಪ್ಪಿದ್ದಾರೆ.
ಕೊರೊನಾ ಸೋಂಕಿಗೆ ದಾವಣಗೆರೆಯಲ್ಲಿ ಮತ್ತೊಬ್ಬ ಹಾಗೂ ವಿಜಯಪುರದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಕರ್ನಾಟಕದಲ್ಲಿ ಇಂದು ಒಂದೇ ದಿನ 22 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 673ಕ್ಕೇರಿದೆ.
ಕರ್ನಾಟಕದಲ್ಲಿ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದೆ. ಈ ಸಡಿಲಿಕೆ ಆಪತ್ತಿಗೆ ಆಹ್ವಾನ ಮಾಡುವಂತಿದೆ. ಈ ಸಮಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದ್ದರೂ ಜನರು ಮೈ ಮರೆತು ಓಡಾಟ ನಡೆಸುತ್ತಿದ್ದಾರೆ.
- Advertisement -