Friday, June 5, 2026
Homeಕರಾವಳಿದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಆರ್ಭಟ : ನಾಳೆಯಿಂದ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಸಾಧ್ಯತೆ

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಆರ್ಭಟ : ನಾಳೆಯಿಂದ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಸಾಧ್ಯತೆ

- Advertisement -
- Advertisement -

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ರಣಕೇಕೆ ಹಾಕುತ್ತಿದೆ. ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಾನೇ ಸಾಗ್ತಿದೆ. ಹಾಗಾಗಿ ನಾಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಜಿಲ್ಲಾಡಳಿತ ಚಿಂತನೆ ನಡೆಸಿದೆ ಎನ್ನಲಾಗಿದೆ.

ಇಂದು ದ.ಕ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆದಿದೆ.  ಸಭೆಯಲ್ಲಿ  ಹಲವು ಕ್ರಮಗಳ ಕುರಿತು ಚರ್ಚೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ನಾಳೆ (ಮೇ.7) ಬೆಳಗ್ಗೆ 6 ರಿಂದ 9 ಗಂಟೆಯ ವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ಕಲ್ಪಿಸಲಾಗುವುದು. ಹಾಗೂ 10 ಗಂಟೆ ಒಳಗೆ ವ್ಯಾಪಾರಸ್ಥರು ಹಾಗೂ ಖರೀದಿದಾರರು ಮನೆ ಸೇರುವಂತೆ ಸೂಚಿಸಬೇಕೆ ಎನ್ನುವ ಸಲಹೆ ಸಭೆಯಲ್ಲಿ ವ್ಯಕ್ತವಾಗಿದ್ದು, ಅಂತಿಮ ತೀರ್ಮಾನ ರಾತ್ರಿಯೊಳಗೆ ಪ್ರಕಟವಾಗುವ ನಿರೀಕ್ಷೆಯಿದೆ.

- Advertisement -

Latest News

error: Content is protected !!