Friday, May 17, 2024
Homeಕರಾವಳಿಉಡುಪಿಕರಾವಳಿ ಮತ್ತೆ ಶುರುವಾಯ್ತು ಕೊರೊನಾ ಆರ್ಭಟ: ನಿನ್ನೆ ಒಂದೇ ದಿನ 72 ಪ್ರಕರಣಗಳು ಪತ್ತೆ

ಕರಾವಳಿ ಮತ್ತೆ ಶುರುವಾಯ್ತು ಕೊರೊನಾ ಆರ್ಭಟ: ನಿನ್ನೆ ಒಂದೇ ದಿನ 72 ಪ್ರಕರಣಗಳು ಪತ್ತೆ

spot_img
- Advertisement -
- Advertisement -

ಮಂಗಳೂರು:  ರಾಜ್ಯದಲ್ಲಿ ಕೊರೊನಾ ಎರಡನೇ ಆರಂಭವಾಗಿದೆ. ಅದರಲ್ಲೂ ಕರಾವಳಿಯಲ್ಲಿ ಕೋವಿಡ್ ಆರ್ಭಟ ಜೋರಾಗಿಯೇ ಇದೆ. ನಿನ್ನೆ ಒಂದೇ ದಿನ ಜಿಲ್ಲೆಯಲ್ಲಿ 72 ಪ್ರಕರಣಗಳು ವರದಿಯಾಗಿರೋದು ಜಿಲ್ಲಾಡಳಿತಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಇನ್ನು ಈಗಾಗಲೇ ಬೆಂಗಳೂರಿನ ಪ್ರತಿಷ್ಟಿತ ಯೆನೆಪೋಯ ವಿಶ್ವವಿದ್ಯಾನಿಲಯದ 9 ಶಿಕ್ಷಣ ಸಂಸ್ಥೆಗಳನ್ನು ಬಂದ್ ಮಾಡಲಾಗಿದೆ. 20ಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿರೋದರಿಂದ ಬಂದ್ ಮಾಡಲಾಗಿದೆ. ಇನ್ನು ಮಣಿಪಾಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕ್ಯಾಂಪಸ್ ನಲ್ಲಿ ಕೋವಿಡ್-19 ಪ್ರಕರಣ ಹೆಚ್ಚಾದ್ದರಿಂದ ಮಣಿಪಾಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕ್ಯಾಂಪಸ್ ಅನ್ನು ಕಂಟೇನರ್ ವಲಯವೆಂದು ಉಡುಪಿ ಜಿಲ್ಲಾ ಆರೋಗ್ಯ ಇಲಾಖೆ ಘೋಷಿಸಿದೆ. ಉಡುಪಿ ಜಿಲ್ಲೆಯ ಮಣಿಪಾಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ನಿನ್ನೆ 27 ಮಂದಿ ಸೇರಿದಂತೆ 33 ಮಂದಿಗೆ ಕೋವಿಡ್-19 ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. 

ಅಂದ್ಹಾಗೆ ದಕ್ಷಿಣಕನ್ನಡ ಜಿಲ್ಲೆಗೆ ಹೊರ ರಾಜ್ಯದಿಂದ ಬರುವವರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ ಅಂತಾ ಈಗಾಗಲೇ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಹೀಗಿದ್ದರೂ ಕೂಡ ಜಿಲ್ಲೆಯಲ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿರೋದು ಆತಂಕ ಮೂಡಿಸಿದೆ. ಜನ ಇನ್ನೂ ಕೂಡ ಕೋವಿಡ್ ನಿಯಮಗಳನ್ನು ಪಾಲಿಸದೇ ಇದ್ದರೆ ಅಪಾಯ ಕಟ್ಟಿಟ್ಟ ಬುತ್ತಿ.

- Advertisement -
spot_img

Latest News

error: Content is protected !!