- Advertisement -
- Advertisement -
ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ಗೆ ಮಹಿಳೆಯೊಬ್ಬಳು ಬಲಿಯಾಗಿದ್ದಾಳೆ. 40 ವರ್ಷದ ಮಹಿಳೆ ಮುಂಬೈ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಮಹಾರಾಷ್ಟ್ರದಲ್ಲಿ ಕೊರೊನಾಗೆ ಒಟ್ಟು 7 ಮಂದಿ ಸಾವನ್ನಪ್ಪಿದಂತಾಗಿದೆ. ದಿನ ದಿನಕ್ಕೂ ಸಾವಿನ ಸಂಖ್ಯೆ ಹೆಚ್ಚಾಗ್ತಿದೆ.
ಆರೋಗ್ಯ ಇಲಾಖೆ ವರದಿ ಪ್ರಕಾರ ಒಂದೇ ದಿನ ದೇಶದಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ. ಸೋಂಕಿತ ರೋಗಿಗಳ ಸಂಖ್ಯೆ 1000 ತಲುಪಿದೆ. ಸಚಿವಾಲಯವು ಆರು ಹೊಸ ಸಾವಿನ ಪ್ರಕರಣಗಳನ್ನು ದಾಖಲಿಸಿದೆ. ದೆಹಲಿ, ಗುಜರಾತ್, ಕರ್ನಾಟಕ, ಕೇರಳ, ಮಹಾರಾಷ್ಟ್ರ, ಜಮ್ಮು ಮತ್ತು ಕಾಶ್ಮೀರ ಮತ್ತು ತೆಲಂಗಾಣದಲ್ಲಿ ಸೋಂಕಿತ ಒಬ್ಬೊಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ.
ವಿಶ್ವದಲ್ಲೂ ಕೊರೊನಾ ರೋಗಿಗಳ ಸಂಖ್ಯೆ ಹೆಚ್ಚಾಗಿದೆ. ಅಮೆರಿಕಾ, ಸ್ಪೇನ್, ಇಟಲಿಯಲ್ಲಿ ಸಾವನ್ನಪ್ಪುತ್ತಿರುವ ರೋಗಿಗಳ ಸಂಖ್ಯೆ ಕ್ಷಣ ಕ್ಷಣಕ್ಕೂ ಹೆಚ್ಚಾಗ್ತಿದೆ.
- Advertisement -