ಬೆಳ್ತಂಗಡಿಯಲ್ಲಿ ಕೊರೋನಾಗೆ ಮೊದಲ ಬಲಿ: ವೇಣೂರಿನ ವ್ಯಕ್ತಿ ಸಾವು

ವೇಣೂರು: ಬೆಳ್ತಂಗಡಿ ತಾಲೂಕಿನ ವೇಣೂರು ಮೂಡುಕೋಡಿ ಪರಿಸರದ ವ್ಯಕ್ತಿಯೊಬ್ಬರು ಮಹಾಮಾರಿ ಕೊರೊನಾವೈರಸ್‌ಗೆ ಬಲಿಯಾಗಿದ್ದಾರೆ. ಇವರು ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದರು ಮತ್ತು ಜಿಲ್ಲೆಯ ಕೋವಿಡ್ ಆಸ್ಪತ್ರೆ ವೆನ್ಲಾಕ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೃತಪಟ್ಟ ವ್ಯಕ್ತಿಯ ಗಂಟಲು ದ್ರವ ಪರೀಕ್ಷೆ ಮಾಡಲಾಗಿದ್ದು, ಕೊರೋನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಬಗ್ಗೆ ಅಧಿಕೃತ ಘೋಷಣೆ ಇನ್ನಷ್ಟೇ ಆಗಬೇಕಿದೆ.