- Advertisement -
![]()
- Advertisement -
ಬೆಂಗಳೂರು : ರಾಜ್ಯದಲ್ಲಿ ಕಿಲ್ಲರ್ ಕೊರೊನಾ ಮರಣ ಮೃದಂಗ ಬಾರಿಸುತ್ತಿದ್ದು, ಆಗಸ್ಟ್ ಅಂತ್ಯದ ವೇಳೆಗೆ ಕೊರೊನಾ ಸೋಂಕಿಗೆ ಮೃತಪಡುವವರ ಸಂಖ್ಯೆ ಹೆಚ್ಚಳವಾಗುತ್ತಿದೆ.
ಕಿಲ್ಲರ್ ಕೊರೊನಾ ಸೋಂಕಿಗೆ ಇಂದು 106 ಮಂದಿ ಬಲಿಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸಾವಿನ ಸಂಖ್ಯೆ 5589 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 27 ಜನರು ಬಲಿಯಾಗಿದ್ದು, ಕೊರೊನಾ ಸೋಂಕಿಗೆ ಸಾವನ್ನಪ್ಪಿದವರ ಸಂಖ್ಯೆ 1938 ಕ್ಕೆ ಏರಿಕೆಯಾಗಿದೆ.
ಇಂದು ರಾಜ್ಯದಲ್ಲಿ 8,852 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 3,35,928ಕ್ಕೆ ಏರಿಕೆಯಾಗಿದೆ. ಇವರಲ್ಲಿ ಇದುವರೆಗೆ 2,42,229 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಕಾರಣ , ರಾಜ್ಯದಲ್ಲಿ 88,091 ಸಕ್ರೀಯ ಸೋಂಕಿತರಿದ್ದಾರೆ.
- Advertisement -


