Sunday, June 7, 2026
Homeತಾಜಾ ಸುದ್ದಿರಾಜ್ಯದಲ್ಲಿ ಇಂದು 1843 ಮಂದಿಗೆ ಕೊರೋನಾ ಪಾಸಿಟಿವ್, 30 ಮಂದಿ ಬಲಿ

ರಾಜ್ಯದಲ್ಲಿ ಇಂದು 1843 ಮಂದಿಗೆ ಕೊರೋನಾ ಪಾಸಿಟಿವ್, 30 ಮಂದಿ ಬಲಿ

- Advertisement -
- Advertisement -

ಬೆಂಗಳೂರು: ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 981 ಪ್ರಕರಣಗಳು ಸೇರಿದಂತೆ ರಾಜ್ಯದಲ್ಲಿ ಒಟ್ಟು 1843 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ.

ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಸೋಮವಾರ ಒಂದೇ ದಿನ ಬೆಂಗಳೂರಿನಲ್ಲಿ 10 ಮಂದಿ ಸೇರಿದಂತೆ ಬರೋಬ್ಬರಿ 30 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 402ಕ್ಕೇರಿಕೆಯಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಇಂದು ಪತ್ತೆಯಾಗಿರುವ 1843 ಪ್ರಕರಣದೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 25317ಕ್ಕೆ ಏರಿಕೆಯಾಗಿದೆ.

- Advertisement -

Latest News

error: Content is protected !!